ಮಾರ್ಚ 2ರಿಂದಲೇ ತಲೆಮರೆಸಿಕೊಂಡಿದ್ದ ಸಿಡಿ ಕೇಸಿನ ಇಬ್ಬರಿಗೆ ನಿರೀಕ್ಷಣಾ ಜಾಮೀನು…!

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನರೇಶ್ ಗೌಡ ಹಾಗೂ ಶ್ರವಣ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಗಳೆಂದೇ ಹೇಳಲಾಗುತ್ತಿರುವ ನರೇಶ್ ಹಾಗೂ ಶ್ರವಣ್ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಹನಿಟ್ರ್ಯಾಪ್, ಬ್ಲ್ಯಾಕ್ ಮೇಲ್ ಆರೋಪದಡಿ ಪ್ರಕರಣ ದಾಖಲಿಸಿದ್ದರು. ಪ್ರಕರಣ ಬೆಳಕಿಗೆ ಬಂದಾಗಿನಿಂದ ಬಂಧನ ಭೀತಿಯಲ್ಲಿರುವ ಆರೋಪಿಗಳು ತಲೆಮರೆಸಿಕೊಂಡಿದ್ದು, ನಿರೀಕ್ಷಣಾ ಜಾಮಿನಿಗಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ 91ನೇ ಸಿಸಿಎಚ್ ನ್ಯಾಯಾಲಯ ಆರೋಪಿಗಳಿಗೆ ಜಾಮೀನು ನೀಡಿದ್ದು, ಮಾರ್ಚ 2ರಿಂದಲೇ ಇಬ್ಬರು ತಲೆಮರೆಸಿಕೊಂಡಿದ್ದರು.