ಚೆಕ್ ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ಭೇಟಿ

ಹುಬ್ಬಳ್ಳಿ: ಜಿಲ್ಲಾಧಿಕಾರಿ ದೀಪಾ ಚೋಳನ್ ಗಬ್ಬೂರ ಹಾಗೂ ತಡಸ ಬಳಿಯ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಥರ್ಮಲ್ ಸ್ಕ್ಯಾನ್ ಮಾಡಿಬೇಕು. ಅಧಿಕೃತ ಪಾಸ್ ಇಲ್ಲದೆ ಪ್ರಯಾಣಿಸುವವರಿಗೆ ಅವಕಾಶ ನೀಡಬಾರದು. ಜಿಲ್ಲೆ ಹಾಗೂ ಹುಬ್ಬಳ್ಳಿ ನಗರಕ್ಕೆ ಆಗಮಿಸುವರಿಗೆ ಥರ್ಮಲ್ ಸ್ಕ್ಯಾನ್ ಮಾಡಿ ಕ್ವಾರೈಟೆನ್ ಸೀಲ್ ಹಾಕಬೇಕು. ಜ್ವರ ಹಾಗೂ ಇತರೆ ಲಕ್ಷಣಗಳು ಕಂಡುಬಂದವರಿಗೆ ಕಿಮ್ಸ್ ಸೇರಿದಂತೆ ಇತರೆಡೆ ಕೋವಿಡ್-19 ಪರೀಕ್ಷೆಗೆ ಮಾಡಿಸಲು ಕಳುಹಿಸಬೇಕು ಎಂದು ಅವರು ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ ಕಾರ್ಯ ನಿರ್ವಾಕಾಧಿಕಾರಿ ಡಾ.ಬಿ.ಸಿ ಸತೀಶ್, ಮಹಾನಗರ ಪಾಲಿಕೆ ಆಯುಕ್ತ ಸುರೇಶ್ ಇಟ್ನಾಳ ಹಾಗೂ ಹುಬ್ಬಳ್ಳಿ ನಗರ ತಹಶೀಲದಾರ ಶಶಿಧರ ಮಾಡ್ಯಾಳ ಉಪಸ್ಥಿತರಿದ್ದರು.