ಡಾ.ಚೆನ್ನವೀರ ಕಣವಿ ಸ್ಥಿತಿ ಗಂಭೀರ- ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ…

ಧಾರವಾಡ: ಕಳೆದ ಒಂದು ತಿಂಗಳಿನಿಂದ ತೀವ್ರ ಅಸ್ವಸ್ಥರಾಗಿರುವ ಹೆಸರಾಂತ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರ ಆರೋಗ್ಯ ಗಂಭೀರವಾಗಿದೆ ಎಂದು ಗೊತ್ತಾಗಿದೆ.
ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಮುಂದುವರೆದಿದ್ದು, ಈಗಷ್ಟೇ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ ಎಂದು ಖಚಿತ ಮೂಲಗಳಿಂದ ತಿಳಿದಿದೆ.

ಕಳೆದ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆಗಮಿಸಿ, ಮುಂದಿನ 3-4 ದಿನಗಳಲ್ಲಿ ಇನ್ನಷ್ಟು ಆರೋಗ್ಯ ಸುಧಾರಿಸುವ ಭರವಸೆ ಇದೆ. ಕಣವಿ ಅವರ ಚಿಂತನೆಗಳು ನಾಡಿಗೆ ಮತ್ತೆ ದೊರೆಯಬೇಕೆಂದು ಆಶಯ ವ್ಯಕ್ತಪಡಿಸಿದರು.
ಕಳೆದ ಒಂದು ತಿಂಗಳ ಹಿಂದೆ ನ್ಯುಮೋನಿಯಾ ಖಾಯಿಲೆಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಆರ್‌ಟಿಪಿಸಿಆರ್ ತಪಾಸಣೆಯಿಂದ ಕೋವಿಡ್ ಪಾಸಿಟಿವ್ ಧೃಡಪಟ್ಟಿತ್ತು. ನಂತರ ಕೋವಿಡ್ ನೆಗೆಟಿವ್ ಆಗಿದೆ. ಹಿರಿಯರಾದ ಕಣವಿ ಅವರು ಬಹಳಷ್ಟು ಗಟ್ಟಿತನದಿಂದ ಚಿಕಿತ್ಸೆಗೆ ಸ್ಪಂದಿಸುತ್ತಿದ್ದರೂ, ಇಂದು ಬೆಳಗಿನಿಂದ ಆರೋಗ್ಯ ಸ್ಥಿತಿ ಮತ್ತಷ್ಟು ವಿಷಯವಾಗಿದೆ.