‘112’ ರಿಂದ ಬಾಲ್ಯವಿವಾಹ ತಡೆ..!
1 min readಧಾರವಾಡ: ಸಾರ್ವಜನಿಕರ ತುರ್ತು ಸೇವೆಗಾಗಿ ಜಿಲ್ಲೆಯಲ್ಲಿ ಆರಂಭಗೊಂಡಿರುವ 112 ಎರಾಸ್ ಸೇವೆಯಿಂದ ಇಂದು ಬಾಲ್ಯ ವಿವಾಹವನ್ನ ತಡೆಗಟ್ಟಲು ಸಾಧ್ಯವಾದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಗಂಜಿಗಟ್ಟಿಯಲ್ಲಿ ನಡೆದಿದೆ.
112ಕ್ಕೆ ಬಾಲ್ಯ ವಿವಾಹ ನಡೆಯುತ್ತಿರುವ ಬಗ್ಗೆ ಮಾಹಿತಿ ಸಿಕ್ಕ ತಕ್ಷಣವೇ ವಾಹನ ಸಿಬ್ಬಂದಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಗಂಜಿಗಟ್ಟಿ ಗ್ರಾಮದ ಬಸವೇಶ್ವರ ನಗರದಲ್ಲಿ ನಡೆಯುತ್ತಿದ್ದ ಬಾಲ್ಯವಿವಾಹವನ್ನ ತಡೆಗಟ್ಟಿದ್ದಾರೆ.
ಬಾಲ್ಯ ವಿವಾಹ ತಡೆಗಟ್ಟಲು ಪೊಲೀಸ್ ಇಲಾಖೆ. ಅಂಗನವಾಡಿ ಕಾರ್ಯಕರ್ತೆಯರು, ಮಕ್ಕಳ ಸಹಾಯವಾಣಿ ಸಿಬ್ಬಂದಿ ಹಾಗೂ ಶಿಶು ಅಭಿವೃದ್ಧಿ ಯೋಜನಾ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.
112 ಸೇವೆಯಿಂದ ಬೇಗನೇ ಹೋಗಲು ಸಾಧ್ಯವಾಗಿದ್ದು, ಸಾರ್ವಜನಿಕರು ಯಾವುದೇ ಮಾಹಿತಿ ಇದ್ದರೂ ಈ ನಂಬರಗೆ ಸಂಪರ್ಕಿಸಿ ಉಪಯೋಗ ತೆಗೆದುಕೊಳ್ಳಬೇಕೆಂದು ಪೊಲೀಸರು ಕೋರಿದ್ದಾರೆ.