Posts Slider

Karnataka Voice

Latest Kannada News

ಶಾಸಕರ ಸಭೆ ಕರೆದು- ಪರಿಹಾರಕ್ಕಾಗಿ ದೆಹಲಿಗೆ ಹೋಗುತ್ತೇನೆ: ಸಿಎಂ ಯಡಿಯೂರಪ್ಪ

1 min read
Spread the love

ಬೆಳಗಾವಿ: ಶೀಘ್ರ ಎಲ್ಲ  ಶಾಸಕರ ಸಭೆ ಕರೆದು ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡಲು ಯೋಜನೆ ರೂಪಿಸಲಾಗುವುದು. ಎಲ್ಲ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಲಾಗುವುದು. ಮುಂದಿನ ವಾರ‌ ದೆಹಲಿಗೆ ಹೋಗಿ ಹೆಚ್ವಿನ ಪರಿಹಾರ ಬಿಡುಗಡೆಗೆ ಮನವಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಅತಿವೃಷ್ಟಿಗೆ ಸಂಬಂಧಿಸಿದಂತೆ ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ(ಆ.25) ನಡೆದ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಕೋವಿಡ್-೧೯ ಇರುವುದರಿಂದ ಎನ್.ಡಿ‌.ಆರ್.ಎಫ್. ಅನುದಾನದಡಿ ತುರ್ತು ಅಗತ್ಯವಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತಕ್ಷಣ ಸರ್ಕಾರಕ್ಕೆ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರವಾಹ ನಿರ್ವಹಣೆ ಮತ್ತಿತರ ತುರ್ತು ಕೆಲಸಕ್ಕೆ ಬೆಳಗಾವಿ ಜಿಲ್ಲೆಯಲ್ಲಿ 412 ಕೋಟಿ ರೂಪಾಯಿ ಅನುದಾನ ಲಭ್ಯವಿದೆ.  ಹೆಚ್ಚಿನ ಹಣ ಬೇಕಾದರೆ ತಕ್ಷಣವೇ ಬಿಡುಗಡೆ ಮಾಡಲಾಗುವುದು. ಜಿಲ್ಲೆಯಲ್ಲಿ ಮನೆ ನಿರ್ಮಾಣಕ್ಕೆ 174 ಕೋಟಿ ರೂಪಾಯಿ ಇದೆ. ಇದಲ್ಲದೇ ಉಳಿದಿರುವ ಅನುದಾನದಲ್ಲಿ ರಸ್ತೆ ದುರಸ್ತಿ ಮತ್ತಿತರ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಿದರು.

ಇದೇ ರೀತಿ ಇತರೆ ಜಿಲ್ಲೆಗಳಲ್ಲಿ ಸಾಕಷ್ಟು ಹಣ ಲಭ್ಯವಿದೆ. ಮನೆ ಕಳೆದುಕೊಂಡಿರುವ ಬೆಳಗಾವಿಯ 44156 ಫಲಾನುಭವಿಗಳಿಗೆ 488 ಕೋಟಿ ಪರಿಹಾರ ಬಿಡುಗಡೆಯಾಗಿದೆ. ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತಕ್ಷಣ ಸರ್ಕಾರಕ್ಕೆ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಳಗಾವಿ-ಧಾರವಾಡ ಸಮಸ್ಯೆಗಳನ್ನು ಗಮನಕ್ಕೆ ಬಂದಿದ್ದು, ಕೋವಿಡ್-೧೯ ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಆಧರಿಸಿ ಮನೆ ಹಾಗೂ ಬೆಳೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ಳಗಾವಿ-ಧಾರವಾಡ ಸಮಸ್ಯೆಗಳನ್ನು ಗಮನಕ್ಕೆ ಬಂದಿದ್ದು, ಕೋವಿಡ್-೧೯ ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಆಧರಿಸಿ ಮನೆ ಹಾಗೂ ಬೆಳೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಪ್ರವಾಹ ಸ್ಥಿತಿಗತಿಯ ಬಗ್ಗೆ ಮಾತನಾಡಿದರು. ಕಂದಾಯ ಸಚಿವ ಆರ್.ಅಶೋಕ, ಕಳೆದ ವರ್ಷದ ಮನೆಪರಿಹಾರ ನೀಡುವ ತಂತ್ರಾಂಶ ಪುನಃ ಆರಂಭಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದರು.


Spread the love

Leave a Reply

Your email address will not be published. Required fields are marked *

You may have missed