ಸಿಎಂ ಮೇಲೆ ಹಲ್ಲೆ…!
1 min readದೇವಸ್ಥಾನವೊಂದರಲ್ಲಿ ಪೂಜೆ ಮಾಡಿ ಬರುವಾಗ ನಾಲ್ಕು ಜನರು ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿ ಗ್ರಾಮದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ನನ್ನ ಮೇಲೆ ಹಲ್ಲೆಯಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ನಾಮಪತ್ರ ಸಲ್ಲಿಕೆ ವೇಳೆ, ದೇವಸ್ಥಾನವೊಂದರಲ್ಲಿ ಪೂಜೆ ಸಲ್ಲಿಸಿ ಬರುವಾಗ ನಾಲ್ಕು ಜನರು ನನ್ನ ಮೇಲೆ ಹಲ್ಲೆಮಾಡಿದ್ದಾರೆ, ಸ್ಥಳೀಯ ಪೊಲೀಸರು ಯಾವುದೇ ಭದ್ರತೆ ನೀಡಿಲ್ಲ.
ಭದ್ರತೆ ಒದಗಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಹಲ್ಲೆಯಿಂದ ತನ್ನ ಕಾಲಿಗೆ ಬಲಗಿ ಏಟು ಬಿದ್ದಿದೆ ಎಂದು ಹೇಳಿದ್ದಾರೆ. ಆದರೆ, ಈ ಆರೋಪಕ್ಕೆ ತಿರುಗೇಟು ನೀಡಿರುವ ಬಿಜೆಪಿ ಮಮತಾ ಬ್ಯಾನರ್ಜಿ ನಾಟಕ ಆರಂಭವಾಗಿದೆ, ಇದು ಟಿಎಂಸಿ ಹಾಗೂ ಮಮತಾ ಪ್ರೇರಿತ ನಾಟಕ ಎಂದು ತಿರುಗೇಟು ನೀಡಿದೆ.
ಈ ಘಟನೆ ಹಾಗೂ ಭದ್ರತಾ ಲೋಪದ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಲು ಟಿಎಂಸಿ ನಿರ್ಧರಿಸಿದೆ. ಇನ್ನೊಂದೆಡೆ ಇಂದು ನಂದಿಗ್ರಾಮದಲ್ಲಿ ನೆಲೆಸಬೇಕಿದ್ದ, ಮಮತಾ ಬ್ಯಾನರ್ಜಿ ತಮ್ಮ ಪ್ರವಾಸ ರದ್ದುಪಡಿಸಿ ವಾಪಸಾಗುತ್ತಿದ್ದಾರೆ.
ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ನಂದಿಗ್ರಾಮದಿಂದ ಸ್ಪರ್ಧಿಸುತ್ತಿದ್ದಾರೆ, ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿಯು ಸುವೇಂದು ಅಧಿಕಾರಿಯನ್ನು ಕಣಕ್ಕಿಳಿಸಿದೆ.
ಮಾರ್ಚ್ 27ಕ್ಕೆ ಮೊದಲ ಹಂತದಲ್ಲಿ ಚುನಾವಣೆ ಆರಂಭಗೊಳ್ಳಲಿದೆ. ಏಪ್ರಿಲ್ 29ಕ್ಕೆ ಅಂತಿಮ ಹಂತದ ಚುನಾವಣೆ ನಡೆಯಲಿರುವುದಾಗಿ ಆಯೋಗ ತಿಳಿಸಿದೆ. ಮೇ 2ಕ್ಕೆ ಚುನಾವಣಾ ಫಲಿತಾಂಶ ಹೊರಬೀಳಲಿದೆ.