ಸಿಎಂ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ಶಾಸಕ ಮುನೇನಕೊಪ್ಪ
ಬೆಂಗಳೂರು: ಸಚಿವ ಸ್ಥಾನ ಸಿಗಲಿ ಎಂಬ ಕಾರ್ಯಕರ್ತರ ಬಯಕೆ ಈಡೇರದಿದ್ದರೂ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರುವ ಶಾಸಕ ಶಂಕರ ಪಾಟೀಲಮುನೇನಕೊಪ್ಪ ಇಂದು ಸಿಎಂ ಯಡಿಯೂರಪ್ಪರನ್ನ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು.
ಕರ್ನಾಟಕ ನಗರ ಮೂಲಭೂತ ಸೌಕರ್ಯ ನಿಗಮದ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ಭೇಟಿಯಾದ ಶಾಸಕ ಶಂಕರ ಪಾಟೀಲಮುನೇನಕೊಪ್ಪ, ತಮಗೆ ಅವಕಾಶ ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.
ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.