ಆಪರೇಷನ್ ಕಮಲ ಆಡಿಯೋ: ಸಿಎಂಗೆ ತಾತ್ಕಾಲಿಕ ರಿಲೀಫ್
1 min readಕಲಬುರಗಿ: ರಾಜ್ಯದಲ್ಲಿಯೇ ಅತಿಯಾದ ಚರ್ಚೆಗೆ ಗ್ರಾಸವಾಗಿದ್ದ ರಾಯಚೂರು ಜಿಲ್ಲೆ ದೇವದುರ್ಗ ಪ್ರವಾಸಿ ಮಂದಿರದಲ್ಲಿನ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಇನ್ನಿತರರಿಗೆ ತಾತ್ಕಾಲಿಕ ರಿಲೀಫ್ ದೊರೆತಿದೆ.
ರಾಯಚೂರು ಜಿಲ್ಲೆ ದೇವದುರ್ಗ ಆಪರೇಷನ್ ಕಮಲ ಆಡಿಯೋ ಪ್ರಕರಣವನ್ನ ಮಾರ್ಚ್ 5 ಕ್ಕೆ ವಿಚಾರಣೆಯನ್ನ ಮುಂದೂಡಿ ಆದೇಶ ಮಾಡಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ಹಾ ಪೀಠದಲ್ಲಿ ಇಂದು ಅರ್ಜಿ ವಿಚಾರಣೆಯಿತ್ತು. ದೂರುದಾರರ ಪರ ವಕೀಲರು ಸಮಯ ಕೇಳಿದ್ದರಿಂದ ಅರ್ಜಿ ವಿಚಾರಣೆಯನ್ನ ಮುಂದೂಡಲಾಯಿತು.
ಕಲಬುರಗಿ ಹೈಕೋರ್ಟ್ ಪೀಠದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅರ್ಜಿ ವಿಚಾರಣೆ ನಡೆದಿತ್ತು. ಸದ್ಯ ಸಿಎಂ ಯಡಿಯೂರಪ್ಪ ಮತ್ತು ಇನ್ನಿತರರಿಗೆ ತಾತ್ಕಾಲಿಕ ರಿಲೀಪ್ ಸಿಕ್ಕಂತಾಗಿದೆ.
ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಸಮ್ಮಿಶ್ರ ಸರಕಾರ ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದಾಗ, ಶರಣಗೌಡ ಎಂಬುವವರ ಜೊತೆ ಹಾಲಿ ಸಿಎಂ ಯೂಡಿಯೂರಪ್ಪನವರು ಮಾತನಾಡಿ, ಹಲವು ಆಮಿಷಗಳನ್ನೊಡ್ಡಿದ್ದನ್ನ ಇಲ್ಲಿ ಸ್ಮರಿಸಬಹುದಾಗಿದೆ.