ಜಯದೇವ ಆಸ್ಪತ್ರೆಯಿಂದಲೂ ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ
ಬೆಂಗಳೂರು: ಕೊವೀಡ್-19 ಹೆಚ್ಚುತ್ತಿರುವ ಬೆನ್ನಲ್ಲೇ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮುಖ್ಯಮಂತ್ರಿಗಳ ಕೋವಿಡ್ 19 ಪರಿಹಾರ ನಿಧಿಗೆ ದೇಣಿಗೆಯನ್ನ ನೀಡಲಾಯಿತು.
ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ ನಿರ್ದೇಶಕ ಡಾ: ಸಿ. ಎನ್. ಮಂಜುನಾಥ್ ಅವರು ರೂ.31,33,800 ಗಳ ಚೆಕ್ಕನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ: ಕೆ.ಸುಧಾಕರ್ ಉಪಸ್ಥಿತರಿದ್ದರು.