ರಂಜಾನ್ ಸಾಮೂಹಿಕ ಪ್ರಾರ್ಥನೆಗಾಗಿ ಸಿಎಂ ಯಡಿಯೂರಪ್ಪರಿಗೆ ಸಿ.ಎಂ.ಇಬ್ರಾಹಿಂ ಪತ್ರ

ಬೆಂಗಳೂರು: ರಂಜಾನ್ ಹಬ್ಬದ ದಿನದಂದು ಈದ್ಗಾ ಮೈದಾನಗಳಲ್ಲಿ ಅಥವಾ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಲು ಅನುಮತಿ ನೀಡಿ. ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸಾಮೂಹಿಕ ನಮಾಜ್ ಮಾಡಲು ಅವಕಾಶ ಮಾಡಿ ಕೊಡಿ ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.
ಮೇ 24 ಅಥವಾ 25 ರಂದು ರಂಜಾನ್ ಆಚರಿಸಲಾಗುತ್ತದೆ. ಅಂದು ಬೆಳಗ್ಗೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಮಾಜ್ ಮಾಡಲು ಅವಕಾಶ ನೀಡಿ. ವೈದ್ಯಕೀಯ ತಜ್ಞರ ಜೊತೆ ಚರ್ಚಿಸಿ, ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಇಬ್ರಾಹಿಂ ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಮನವಿ ಮಾಡಿದ್ದಾರೆ.