ಸಿಎಂ ಯಡಿಯೂರಪ್ಪ ವೀಡಿಯೋ ಕಾಲ್: ಜಿಲ್ಲಾಧಿಕಾರಿಗಳಿಂದ ಸಮಗ್ರ ಮಾಹಿತಿ
ಬೆಂಗಳೂರು: ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕಲಬುರ್ಗಿ, ವಿಜಯಪುರ, ಉಡುಪಿ, ಯಾದಗಿರಿ, ರಾಯಚೂರು, ಬೆಳಗಾವಿ ಮತ್ತು ಬೀದರ್ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಿ.ಇ. ಒ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.
ಕಲಬುರ್ಗಿ ಡಿಸಿಯಿಂದ ಸಿಎಂ ಗೆ ಕೊರೋನಾ ಮಾಹಿತಿ. ಇವತ್ತಿಗೆ ಕಲಬುರ್ಗಿಯಲ್ಲಿ 352 ಪ್ರಕರಣ ಪಾಸಿಟಿವ್. ಇವತ್ತೊಂದೇ ದಿನ ಕಲಬುರ್ಗಿಯಲ್ಲಿ 47 ಹೊಸ ಕೊರೊನಾ ಪ್ರಕರಣಗಳು ಪತ್ತೆ. ಇನ್ನೂ ಹೊಸ ಪ್ರಕರಣಗಳ ಬಗ್ಗೆ ಅಧಿಕೃತವಾಗಿ ಘೋಷಣೆ ಆಗಿಲ್ಲ ಎಂದು ಕಲಬುರ್ಗಿ ಡಿಸಿಯಿಂದ ಸಿಎಂಗೆ ಮಾಹಿತಿ.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್, ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.