ಹಿರಿಯ ರಾಜಕಾರಣಿ ಎಂ.ವಿ.ರಾಜಶೇಖರನ್ ನಿಧನ: ಹಲವರ ಕಂಬನಿ

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಕಾಂಗ್ರೆಸ್ ಧುರೀಣ ಎಂ.ವಿ.ರಾಜಶೇಖರನ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ನಾಲ್ಕು ಮಕ್ಕಳನ್ನ ಹೊಂದಿದ್ದ ರಾಜಶೇಖರನ್ ಅವರು ಕಾಂಗ್ರೆಸ್ ಪಕ್ಷದ ಬಹುಮುಖ್ಯ ಪಾತ್ರ ವಹಿಸಿದ್ದರು. ಸಕ್ರಿಯ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಇವರ ಅಗಲಿಕೆ, ಕಾಂಗ್ರೆಸ್ ಗೆ ತುಂಬಲಾರದ ನಷ್ಟವನ್ನುಂಟು ಮಾಡಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸೇರಿದಂತೆ ಹಲವರು ರಾಜಶೇಖರವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.