ನಾಳೆ ಬಂದ್ : ಅವಳಿನಗರದಲ್ಲಿ ಪೊಲೀಸರ ಕಟ್ಟೇಚ್ಚರ: ಕಿಡಗೇಡಿಗಳಿಗೆ ಎಚ್ಚರಿಕೆ..
1 min readಹುಬ್ಬಳ್ಳಿ: ವಿವಿಧ ಕನ್ನಡಪರ, ರೈತಪರ, ದಲಿತಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು “ಕರ್ನಾಟಕ ಬಂದ್” ಕರೆ ನೀಡಿದ್ದು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಕಟ್ಟೇಚ್ಚರ ವಹಿಸಿದೆ.
ರೈತರ ಹೆಸರಿನಲ್ಲಿ ಕಿಡಿಗೇಡಿತನ ಮಾಡುವಂತಹವರ ಮೇಲೆ ನಿಗಾ ವಹಿಸಿದ್ದೇವೆ ಎಂದು ಹೇಳಿಕೊಂಡಿರುವ ಪೊಲೀಸ್ ಪ್ರಕಟಣೆ, ಹುಬ್ಬಳ್ಳಿ-ಧಾರವಾಡ ಅವಳಿನಗರದ ಎಲ್ಲಾ ಠಾಣೆಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಅಧಿಕಾರಿ, ಸಿಬ್ಬಂದಿಗಳನ್ನು ಬಂದೋಬಸ್ತ ನಿಯೋಜನೆ ಮಾಡಿದ್ದಾರಂತೆ.
ಕೆಎಸ್‌ಆರ್‌ಪಿ ಪ್ಲಟೂನ್‌ಗಳು, ಸಿಎಆರ್ ಪಾರ್ಟಿಗಳು, ಅಗ್ನಿಶಾಮಕ ವಾಹನಗಳು
ಹಾಗೂ ಠಾಣಾ ವ್ಯಾಪ್ತಿಯಲ್ಲಿ ಪೆಟ್ರೋಲಿಂಗ್ ವಾಹನಗಳು, ಹೈ-ವೇ ಪೆಟ್ರೋಲಿಂಗ್ ವಾಹನಗಳನ್ನು ಬಂದೋಬಸ್ತ ಕರ್ತವ್ಯಕ್ಕೆ ನಿಯೋಜನೆ ಮಾಡಿರುವ ಬಗ್ಗೆ ಮಾಹಿತಿಯನ್ನ ನೀಡಿದ್ದಾರೆ.
ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡಿದ್ದಲ್ಲಿ ಅಂತವರ ಮೇಲೆ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂಬುದನ್ನೂ ಪ್ರಕಟಣೆಯಲ್ಲಿ ನಮೂದು ಮಾಡಿದ್ದಾರೆ.