“ಮನೋ ಉದ್ರೇಖಕಾರಿ” ವಸ್ತು ಮಾರಾಟ- ಆರೋಪಿಗಳ ಪತ್ತೆಗಾಗಿ ಪೊಲೀಸರೊಂದಿಗೆ ಸಹಕರಿಸಿ
1 min readಹುಬ್ಬಳ್ಳಿ: ಪೊಲೀಸ್ ಕಮೀಷನರೇಟ್ ಕಛೇರಿಯ ಸಭಾಭವನದಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ಘಟಕದ ವ್ಯಾಪ್ತಿಯ ಎಲ್ಲ ಪೊಲೀಸ್ ಠಾಣೆಯ ಎನ್‍ಡಿಪಿಎಸ್ ನೋಡಲ್ ಅಧಿಕಾರಿಗಳಿಗೆ ಎನ್‍ಡಿಪಿಎಸ್ ಕಾಯ್ದೆಗೆ ಸಂಬಂಧಿಸಿದಂತೆ ಕಾರ್ಯಾಗಾರ ನಡೆಸಲಾಯಿತು.
ಠಾಣಾ ಮಟ್ಟದಲ್ಲಿ ಮಾದಕ ದ್ರವ್ಯ ಸೇವನೆ, ಸಂಗ್ರಹ, ಸಾಗಾಟ ಮತ್ತು ಮಾರಾಟ ತಡೆಗಟ್ಟುವ ಕುರಿತು ಉಪಯುಕ್ತವಾದ ಮಾಹಿತಿ ಸಂಗ್ರಹಿಸಲು ಮತ್ತು ಅಂತಹ ಪ್ರಕರಣಗಳು ಕಂಡು ಬಂದಲ್ಲಿ ಪರಿಣಾಮಕಾರಿಯಾಗಿ ಕಾನೂನಿನ ಕ್ರಮ ಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಠಾಣಾ ಮಟ್ಟದಲ್ಲಿರುವ ಶಾಲಾ ಕಾಲೇಜುಗಳು ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳು ಮತ್ತು ಹಿಂದೆ ದಾಖಲಾದ ಪ್ರಕರಣದಲ್ಲಿನ ಆರೋಪಿತರ ಬಗ್ಗೆ ಮಾಹಿತಿ ಕಲೆಹಾಕಿ ಅವರ ಮೇಲೆ ನಿಗಾವಹಿಸುವಂತೆ ಪೊಲೀಸ ಆಧಿಕಾರಿಗಳಿಗೆ ವಿವರಿಸಲಾಗಿದೆ.
ಸಾರ್ವಜನಿಕರು ತಾವು ವಾಸಿಸುವ ಪ್ರದೇಶದಲ್ಲಿ, ಕೆಲಸ ಮಾಡುವ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಯಾವುದೇ ತರಹದ “ಮನೋ ಉದ್ರೇಖಕಾರಿ” ವಸ್ತುಗಳನ್ನು ಉಪಯೋಗಿಸುವುದು, ಮಾರಾಟ ಮಾಡುವುದು, ಸಂಗ್ರಹಿಸಿಡುವುದು ಕಂಡುಬಂದಲ್ಲಿ ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಿ ಪೊಲೀಸರೊಂದಿಗೆ ಸಹಕರಿಸಿ ಅಪರಾಧಗಳ ಬಗ್ಗೆ ಮಾಹಿತಿಯನ್ನು ಕೂಡಲೇ ಹುಬ್ಬಳ್ಳಿ-ಧಾರವಾಡ ಪೊಲೀಸ ಕಮೀಷನರೇಟ್ ಘಟಕದ ಎನ್‍ಡಿಪಿಎಸ್ (ಮಾದಕ ದ್ರವ್ಯ) ಟೋಲ್ ಫ್ರೀ ನಂ – 1908 ನೇದ್ದಕ್ಕೆ ಅಥವಾ 0836-2233575 ನೇದ್ದಕ್ಕೆ ಕರೆ ಮಾಡಿ ಮಾಹಿತಿ ನೀಡಲು ಕೋರಲಾಗಿದೆ.
ಪೊಲೀಸ್ ಆಯುಕ್ತ ಆರ್.ದಿಲೀಪ ಪಿಐಗಳಾದ ಎನ್.ಸಿ.ಕಾಡದೇವರ, ಅಲ್ತಾಫ್ ಮುಲ್ಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.