ದಾವಣಗೆರೆ ಜಿಲ್ಲಾಡಳಿತಕ್ಕೆ ತಲೆನೋವಾದ ಸಾರಿ ಹಾಗೂ ಐಎಲ್ ಐ ಕೇಸ್ ಗಳು

ದಾವಣಗೆರೆ: ಕಂಟೋನ್ಮೆಂಟ್ ಜೋನ್ ಗಳಲ್ಲಿ ಅನಾರೋಗ್ಯದಿಂದ ಬಳಲುವ 630 ಜನರ ಗಂಟಲು ದ್ರವ ಸಂಗ್ರಹ ಮಾಡಲಾಗಿದ್ದು, ಎಳು ಜನ ಕೊರೋನಾ ಪಾಸಿಟಿವ್ ಬಂದಿದೆ. ಇನ್ನೂ 623 ಜನರ ವರದಿ ನೆಗೆಟಿವ್ ಬಂದಿದೆ.
ನಿರಂತರವಾಗಿ ಕಂಟೋನ್ಮೆಂಟ್ ಜೋನ್ ಆರಂಭವಾದ ಆರೋಗ್ಯ ಸರ್ವೇ. ನಿನ್ನೆ ರೈತರ ಬೀದಿ ಪ್ರದೇಶದಲ್ಲಿ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಹೀಗಾಗಿ ಹೊಸ ಕಂಟೋನ್ಮೆಂಟ್ ಜೋನ್ ಮಾಡಲಾಗಿದೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾಹಿತಿ ನೀಡಿದ್ದಾರೆ.