ರಾಜ್ಯದಲ್ಲಿಂದು 13800 ಪಾಸಿಟಿವ್- 25346 ಗುಣಮುಖ: 365 ಸಾವು…!

ಬೆಂಗಳೂರು: ರಾಜ್ಯದಲ್ಲಿಂದು ತಿಂಗಳುಗಳ ನಂತರ ಮೊದಲ ಬಾರಿಗೆ ಕಡಿಮೆ ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಮೃತಪಡುವವರ ಸಂಖ್ಯೆಯಲ್ಲಿ ಮಾತ್ರ ಕಡಿಮೆಯಾಗಿಲ್ಲ.

ರಾಜ್ಯದಲ್ಲಿ 13800 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 25346 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 365 ಸೋಂಕಿತರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.
ಧಾರವಾಡದಲ್ಲಿ 247 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 633 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 8 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ.