ಪ್ರಮೋದ ಮುತಾಲಿಕ್ ರಿಗೆ ಕೊರೋನಾ ಪಾಸಿಟಿವ್: ಬೆಂಗಳೂರಲ್ಲಿ ದಾಖಲು
ಬೆಂಗಳೂರು: ರಾಜ್ಯದ ಹಲವೆಡೆ ಸಂಚರಿಸುತ್ತಿರುವ ಸಮಯದಲ್ಲೇ ಜ್ಚರದಿಂದ ಬಳಲುತ್ತಿದ್ದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಕಳೆದ ರಾತ್ರಿಯೇ ಬೆಂಗಳೂರಿನ ಯಲಹಂಕದಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಪ್ರಮೋದ ಮುತಾಲಿಕ್ ರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಇತ್ತೀಚೆಗೆ ಮೈಸೂರು ಸಂಸದ ಪ್ರತಾಪ ಸಿಂಹ ಸೇರಿದಂತೆ ಹಲವರನ್ನ ಭೇಟಿಯಾಗಿದ್ದರು. ರಾಜ್ಯದಲ್ಲಿನ ಆಗುಹೋಗುಗಳ ಬಗ್ಗೆ ಸಮಾಲೋಚನೆ ಮಾಡಿದ್ದರು.
ಹೆಚ್ಚು ಪ್ರಯಾಣ ಮಾಡಿದ್ದರಿಂದ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಹಿನ್ನೆಲೆಯಲ್ಲಿ ತಪಾಸಣೆ ಮಾಡಿದಾಗ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕರಿಗೆ ಕೊರೋನಾ ದೃಢಪಟ್ಟಿರುವುದರಿಂದ ಇಂದು ಧಾರವಾಡ ಲೈನ್ ಬಜಾರನಲ್ಲಿರುವ ಹನಮಂತ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಲಿದ್ದು, ಕೊರೋನಾ ಗೆದ್ದು ಬರಲಿ ಎಂದು ಪ್ರಾರ್ಥನೆ ನಡೆಯಲಿದೆ.