ಹುಬ್ಬಳ್ಳಿ ಒಂದೇ ಕುಟುಂಬದ ನಾಲ್ವರಿಗೆ ಕೊರೋನಾ ಪಾಸಿಟಿವ್

ಹುಬ್ಬಳ್ಳಿ: ವಾಣಿಜ್ಯನಗರದಲ್ಲಿ ಮತ್ತೆ ನಾಲ್ಕು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ನಿನ್ನೆಯಷ್ಟೇ ಪಾಸಿಟಿವ್ ಪತ್ತೆಯಾಗಿದ್ದ ವ್ಯಕ್ತಿಯ ಸಂಬಂಧಿಗಳಲ್ಲೇ ಪಾಸಿಟಿವ್ ಲಕ್ಷಣ ಕಂಡು ಬಂದಿದ್ದು, ಎಲ್ಲರನ್ನೂ ಕಿಮ್ಸ್ ಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಹುಬ್ಬಳ್ಳಿ ಮುಲ್ಲಾ ಓಣಿಯ ರೋಗಿ ನಂಬರ 194ರ ಅಣ್ಣ ಮತ್ತು ಅಣ್ಣನ ಮಕ್ಕಳಿಗೆ ಪಾಸಿಟಿವ್ ಲಕ್ಷಣ ಕಂಡು ಬಂದಿದೆ. ಮೂರುವರೆ ವರ್ಷದ ಗಂಡುಮಗು, 5ವರ್ಷದ ಗಂಡು ಮಗು, 7 ವರ್ಷದ ಹೆಣ್ಣುಮಗು ಹಾಗೂ 37 ವರ್ಷದ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಬಂದಿದೆ. ಈಗಾಗಲೇ ಎಲ್ಲರನ್ನೂ ಕಿಮ್ಸಗೆ ರವಾನೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.