40 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್…!
1 min readಬೆಂಗಳೂರು: ನಗರದ ಕಾವಲ್ ಬೈರಸಂದ್ರದ ಮಂಜುಶ್ರೀ ನರ್ಸಿಂಗ್ ಕಾಲೇಜಿನ 40 ವಿದ್ಯಾರ್ಥಿಗಳಲ್ಲಿ ಕೊರೋನಾ ಪಾಸಿಟಿವ್ ದೃಢವಾಗಿದ್ದು, ಕೇರಳದಿಂದ ಬಂದ ಇಬ್ಬರು ವಿದ್ಯಾರ್ಥಿಗಳಿಂದ ಇನ್ನುಳಿದವರಿಗೂ ಸೋಂಕು ಹರಡಿದೆ ಎಂದು ಹೇಳಲಾಗಿದೆ.
ಕೊರೋನಾ ಪಾಸಿಟಿವ್ ದೃಢವಾದ ಹಿನ್ನೆಲೆಯಲ್ಲಿ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ ಅವರು ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ, ಕೋವಿಡ್ ಹರಡದಂತೆ ತೆಗೆದುಕೊಂಡ ಮುಂಜಾಗ್ರತಾ ಕ್ರಮಗಳನ್ನ ಪರಿಶೀಲನೆ ನಡೆಸಿದರು.
ಮಂಜುಶ್ರೀ ಕಾಲೇಜಿನಲ್ಲಿ 210 ವಿದ್ಯಾರ್ಥಿಗಳಿದ್ದು, ಈ ಶೈಕ್ಷಣಿಕ ವರ್ಷದ ತರಗತಿಗಳು ಜನೇವರಿ 25 ರಿಂದ ಆರಂಭವಾಗಿವೆ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಹುತೇಕರು ಕೇರಳದವರೇ ಆಗಿದ್ದಾರೆ.
ಕೇರಳದ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುವ ಮುನ್ನ ಆರ್ ಟಿಪಿಎಸ್ಆರ್ ಪರೀಕ್ಷೆ ಮಾಡಿಸಿಕೊಳ್ಳುವುದನ್ನ ಕಡ್ಡಾಯಗೊಳಿಸಲಾಗಿದೆ. ಕೊರೋನಾ ಸೋಂಕು ಇಲ್ಲದವರಿಗೆ ಮಾತ್ರ ಕಾಲೇಜಿಗೆ ಪ್ರವೇಶ ನೀಡಬೇಕೆಂದು ಬಿಬಿಎಂಪಿ ಸೂಚನೆ ನೀಡಿದೆ.