ರಾಜ್ಯದಲ್ಲಿಂದು ಮತ್ತೆ 16387 ಹೊಸ ಪ್ರಕರಣ- 21199 ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಗುಣಮುಖರಾದವರ ಸಂಖ್ಯೆಯಲ್ಲೂ ಏರಿಕೆ ಕಂಡಿದೆ. ಆದರೆ, ಸಾವಿನ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿಲ್ಲ.

ಇಂದು ರಾಜ್ಯದಲ್ಲಿ ಒಟ್ಟು 16387 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 21199 ಸೋಂಕಿತರು ಗುಣಮುಖರಾಗಿದ್ದಾರೆ. ಆದರೆ, 463 ಸೋಂಕಿತರು ಸಾವಿಗೀಡಾಗಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿಂದು ಒಟ್ಟು 245 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 781 ಸೋಂಕಿತರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 5 ಸೋಂಕಿತರು ಸಾವಿಗೀಡಾಗಿದ್ದಾರೆ.