ರಾಜ್ಯದಲ್ಲಿಂದು 1365 ಕೊರೋನಾ ಪ್ರಕರಣ: 26 ಸೋಂಕಿತರ ಸಾವು..!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಮತ್ತೆ ಕಾಣ ಸಿಗುತ್ತಿದ್ದು, ಇಂದು 1365 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ವಿವಿಧ ಜಿಲ್ಲೆಯಲ್ಲಿ 26 ಸೋಂಕಿತರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.

ಬೆಂಗಳೂರು ನಗರದಲ್ಲಿ ಅತಿ ಹೆಚ್ಚು 327 ಪ್ರಕರಣಗಳು ಪತ್ತೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 268 ಪ್ರಕರಣಗಳು ಪತ್ತೆಯಾಗಿವೆ. ಚಾಮರಾಜನಗರದಲ್ಲಿ 11 ಸೋಂಕಿತರು ಸಾವಿಗೀಡಾಗಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಹೊಸದಾಗಿ 10 ಪ್ರಕಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ 124 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ 1291 ಸೋಂಕಿತರು ಪ್ರಾಣವನ್ನ ಕಳೆದುಕೊಂಡತಾಗಿದೆ.