ಧಾರವಾಡ ಜಿಲ್ಲೆಯಲ್ಲಿ ಕೊರೋನಾದಿಂದ ಇಬ್ಬರ ಸಾವು: ರಾಜ್ಯದ ಪ್ರತಿ ಜಿಲ್ಲೆಯ ಮಾಹಿತಿ ಇಲ್ಲಿದೆ…!

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ಮೂರನೇಯ ಅಲೆಯ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಸಮಯದಲ್ಲಿಯೇ ಇಂದು ರಾಜ್ಯದಲ್ಲಿ 1213 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿಂದು 25 ಸೋಂಕಿತರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.

ಬೆಂಗಳೂರಲ್ಲಿ 319 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಪ್ರಾಣವನ್ನ ಕಳೆದುಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 269 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 10 ಸೋಂಕಿತರು ಚಿಕಿತ್ಸೆ ಫಲಿಸದೇ ಪ್ರಾಣವನ್ನ ಕಳೆದುಕೊಂಡಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಹೊಸದಾಗಿ 12 ಪ್ರಕರಣಗಳು ಪತ್ತೆಯಾಗಿದ್ದು, 2 ಸೋಂಕಿತರು ಸಾವಿಗೀಡಾಗಿದ್ದಾರೆ. ಈ ಮೂಲಕ ಧಾರವಾಡ ಜಿಲ್ಲೆಯಲ್ಲಿ ಸಾವಿಗೀಡಾದವರ ಸಂಖ್ಯೆ 1297ಕ್ಕೇರಿದೆ.