ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಡೇಟ್ ಫಿಕ್ಸ್…!
1 min readಬೆಂಗಳೂರು: ಬಹುದಿನಗಳಿಂದ ಚರ್ಚೆಯಾಗುತ್ತಿದ್ದ ಮಹಾನಗರ ಪಾಲಿಕೆಯ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಹಸಿರು ನಿಶಾನೆ ತೋರಿಸಿದ್ದು, ಆಗಸ್ಟ್ 16ಕ್ಕೆ ಜಿಲ್ಲಾಧಿಕಾರಿಗಳು ಚುನಾವಣೆಯ ಅಧಿಸೂಚನೆಯನ್ನ ಹೊರಡಿಸಲಿದ್ದಾರೆ.
ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಗೆ ಹಸಿರು ನಿಶಾನೆ ತೋರಿಸಲಾಗಿದ್ದು, ಸೆಪ್ಟಂಬರ್ 3ಕ್ಕೆ ಚುನಾವಣೆ ನಡೆಯಲಿದ್ದು, ಸೆಪ್ಟಂಬರ್ 6ಕ್ಕೆ ಮತ ಎಣಿಕೆ ನಡೆಯಲಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯು ಕಳೆದ 2 ವರ್ಷದಿಂದ ನೆನೆಗುದಿಗೆ ಬಿದ್ದಿತ್ತು. ಆದರೀಗ, ಚುನಾವಣೆ ಪ್ರಕ್ರಿಯೆಗಳಿಗೆ ಚಾಲನೆ ದೊರಕುತ್ತಿರುವುದರಿಂದ ಹೊಸ ಅಲೆ ಆರಂಭವಾಗಲಿದೆ.