ಹುಬ್ಬಳ್ಳಿ: ಸಾಕ್ಷ್ಯ ಹೇಳಲು ಬಂದಿದ್ದ ಇನ್ಸಪೆಕ್ಟರ್ ತಂದೆ ಕೋರ್ಟ್‌ನಲ್ಲೇ ಸಾವು…!!!
ಹುಬ್ಬಳ್ಳಿ: ಹೊಸೂರಿನ ಸಿವಿಲ್ ಕೋರ್ಟ್‌ನಲ್ಲಿ ಅತ್ಯಂತ ದುರದೃಷ್ಟಕರ ಘಟನೆಯೊಂದು ನಡೆದಿದೆ. ಖಾಸಗಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ಹೇಳಲು ಬಂದಿದ್ದ ಕೃಷ್ಣ ಲಕ್ಷ್ಮಣ ಪವಾರ್ (69) ಎಂಬುವವರು ನ್ಯಾಯಾಲಯದ ಆವರಣದಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
Videos…
ಮೃತ ಕೃಷ್ಣ ಪವಾರ್ ಅವರು ಮೂಲತಃ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೂಡೂರು ಗ್ರಾಮದವರು. ಅವರು ಕೋರ್ಟ್ ಕಲಾಪದ ವೇಳೆ ಸಾಕ್ಷ್ಯ ಪೀಠದಲ್ಲಿ ನಿಂತು ಮಾಹಿತಿ ನೀಡುತ್ತಿದ್ದರು. ಈ ಸಂದರ್ಭದಲ್ಲಿ ಅವರಿಗೆ ಇದ್ದಕ್ಕಿದ್ದಂತೆ ತೀವ್ರವಾದ ಎದೆನೋವು ಕಾಣಿಸಿಕೊಂಡು ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅಲ್ಲಿದ್ದವರು ಸಹಾಯಕ್ಕೆ ಧಾವಿಸಿದರೂ ಸಹ, ಅವರು ಕೊನೆಯುಸಿರೆಳೆದಿದ್ದರು.
ಮೃತರ ಪುತ್ರ ಸಂತೋಷ್ ಪವಾರ್ ಅವರು ಹಾವೇರಿಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ವಿಷಯ ತಿಳಿದ ತಕ್ಷಣ ಅವರು ಸ್ಥಳಕ್ಕೆ ಆಗಮಿಸಿದ್ದು, ತಂದೆಯ ಸಾವಿನಿಂದ ಆಘಾತಕ್ಕೊಳಗಾಗಿದ್ದಾರೆ.
ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಮತ್ತು ಡಿಸಿಪಿ ಮಹಾನಂದ್ ಅವರು ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.
