ತಜ್ಞರೊಂದಿಗೆ ಸಮಾಲೋಚನೆ ಮಾಡಿದ ಸಿಎಂ: ಕೋವಿಡ್ ನಿಯಂತ್ರಣಕ್ಕೆ ರಣತಂತ್ರ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಗಳಿಗೆ ಸಂಬಂಧಿಸಿದಂತೆ ಮುಂದಿನ ಕಾರ್ಯತಂತ್ರಗಳ ಕುರಿತು ಇಂದು ಸಂಜೆ ತಜ್ಞರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪನವರು ಸಮಾಲೋಚನೆ ಸಭೆ ನಡೆಸಿ, ಸಲಹೆಗಳನ್ನು ಪಡೆದರು.
ತಜ್ಞ ವೈದ್ಯರುಗಳಾದ ಡಾ.ದೇವಿಶೆಟ್ಟಿ, ಡಾ.ಮಂಜುನಾಥ್, ಡಾ.ಗಿರೀಶ್, ಡಾ.ಸುದರ್ಶನ್, ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಸಭೆಯಲ್ಲಿ ಭಾಗವಹಿಸಿದ್ದರು.
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ವೈರಸ್ ಹಾವಳಿಯನ್ನ ತಡೆಗಟ್ಟುವ ಸಂಬಂಧ ತಜ್ಷರೊಂದಿಗೆ ಮಾಹಿತಿಯನ್ನ ಪಡೆದ ಸಿಎಂ ಯಡಿಯೂರಪ್ಪ, ಮುಂದಿನ ದಿನಗಳಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಬೇಕಾಗುವ ಕ್ರಮವನ್ನ ಜರುಗಿಸುವ ತೀರ್ಮಾನವನ್ನ ಸಭೆಯಲ್ಲಿ ತೆಗೆದುಕೊಳ್ಳಲಾಯಿತು.