ಶಿಕ್ಷಕನಿಗೆ ಥಳಿತ, ಚಪ್ಪಲಿ ಹಾರ ಪ್ರಕರಣ: ಸರ್ಕಲ್ ಇನ್ಸಪೆಕ್ಟರ್, ಹೆಡ್ಕಾನ್ಸಟೇಬಲ್ ಅಮಾನತ್ತು…!!!
ಸರಕಾರಿ ಶಾಲೆ ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ
ಮೆರವಣಿಗೆ ನಡೆಸಿದ್ದ ಸ್ಥಳೀಯರು ಪಾಲಕರು
ಹಾವೇರಿ: ಸವಣೂರಿನ ಸರ್ಕಾರಿ ಉರ್ದು ಶಾಲೆ ಶಿಕ್ಷಕ ಜಗದೀಶ್ ಅವರನ್ನು ಥಳಿಸಿ ಚಪ್ಪಲಿ ಹಾರ ಹಾಕಿ ರಸ್ತೆಗಳಲ್ಲಿ ಮೆರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಸವಣೂರು ಪೊಲೀಸ್ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಹಾಗೂ ಹೆಡ್ ಕಾನ್ಸ್ಟೇಬಲ್ರನ್ನ ಸೇವೆಯಿಂದ
ಅಮಾನತ್ತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಉರ್ದು ಶಾಲೆಯ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಕೆಲವರು ಶಿಕ್ಷಕ ಜಗದೀಶ ಅವರನ್ನು ಥಳಿಸಿ ಚಪ್ಪಲಿ ಹಾರ ಹಾಕಿ ಡಿ.10ರಂದು ಮೆರವಣಿಗೆ ಮಾಡಿದ್ದರು.
ಈ ಘಟನೆ ಬಗ್ಗೆ ಪ್ರಾಥಮಿಕ ಮಾಹಿತಿ ಕಲೆಹಾಕಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಯಶೋಧಾ ವಂಟಗೋಡಿ ದಕ್ಷಿಣ ವಲಯ ದಾವಣಗೆರೆ ಐಜಿಪಿ ಬಿ.ಆರ್. ರವಿಕಾಂತೇಗೌಡ ಅವರಿಗೆ ವರದಿ ಸಲ್ಲಿಸಿದ್ದರು.
ವರದಿ ಆಧರಿಸಿ ಇನ್ಸ್ಪೆಕ್ಟರ್ ಎಸ್. ದೇವಾನಂದ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಐಜಿಪಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಇಲಾಖಾ ವಿಚಾರಣೆಗೂ ನಿರ್ದೇಶನ ನೀಡಿದ್ದಾರೆ. ಹೆಡ್ ಕಾನ್ಸ್ಟೆಬಲ್ ಮಲ್ಲಿಕಾರ್ಜುನ ಒದುನವರ ಅವರನ್ನು ಎಸ್ಪಿ ಯಶೋಧಾ ವಂಟಗೋಡಿ ಅವರೇ ಅಮಾನತು ಮಾಡಿ ಆದೇಶಿಸಿದ್ದಾರೆ.
