ಕೋಮಾರದೇಸಾಯಿ ನೇತೃತ್ವದಲ್ಲಿ ಕ್ರಿಕೆಟ್ ಪಂದ್ಯಾವಳಿ
1 min readಧಾರವಾಡ: ಕೇಂದ್ರ ಸಚಿವ ಹಾಗೂ ಧಾರವಾಡ ಸಂಸದ ಪ್ರಲ್ಹಾದ ಜೋಶಿ ಹಾಗೂ ಧಾರವಾಡ 71 ಕ್ಷೇತ್ರದ ಶಾಸಕ ಅಮೃತ ದೇಸಾಯಿ ಜನ್ಮದಿನದ ಅಂಗವಾಗಿ ಧಾರವಾಡ ಗ್ರಾಮಾಂತರ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಘಟಕ ಕ್ರಿಕೆಟ್ ಪಂದ್ಯಾವಳಿಯನ್ನ ಆಯೋಜನೆ ಮಾಡಿದೆ.
ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಈ ಪಂದ್ಯಾವಳಿ ಇದೇ ತಿಂಗಳ 21ರಂದು ನಡೆಯಲಿವೆ. ಈ ಪಂದ್ಯಾವಳಿಗಳಲ್ಲಿ ಆಯ್ದ ತಂಡಗಳು ಭಾಗವಹಿಸಲಿದ್ದು, ಕ್ರಿಕೆಟ್ ಪ್ರೇಮಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಧಾರವಾಡ ಗ್ರಾಮಾಂತರ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಶಂಕರ ಕೋಮಾರದೇಸಾಯಿ ಮನವಿ ಮಾಡಿಕೊಂಡಿದ್ದಾರೆ.
ಪಂದ್ಯಾವಳಿಯಲ್ಲಿ ಭಾಗವಹಿಸಲು ಇಚ್ಚಿಸುವ ತಂಡಗಳು ಬೆಳಿಗ್ಗೆ 9ಗಂಟೆಯೊಳಗೆ ಕೃಷಿ ವಿಶ್ವವಿದ್ಯಾಲಯದ ಮೈದಾನದಲ್ಲಿ ಹಾಜರಿರಬೇಕು. ಬೆಳಗಿನ ಉಪಹಾರ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆಯನ್ನ ಸಂಘಟಕರು ಮಾಡಿರುವುದಾಗಿ ಕೋಮಾರದೇಸಾಯಿ ಹೇಳಿದ್ದಾರೆ.
ಪಂದ್ಯಾವಳಿಯ ಸಮಯದಲ್ಲಿ ಯುವ ಮೋರ್ಚಾ ಪದಾಧಿಕಾರಿಗಳು ನೇತೃತ್ವ ವಹಿಸಲಿದ್ದು, ಪಕ್ಷದ ಚುನಾಯಿತ ಪ್ರತಿನಿಧಿಗಳು, ಮುಖಂಡರು, ಪ್ರಮುಖರು ಉದ್ಘಾಟನೆಗೆ ಆಗಮಿಸಲಿದ್ದಾರೆಂದು ಜಿಲ್ಲಾಧ್ಯಕ್ಷ ಶಂಕರ ಕೋಮಾರದೇಸಾಯಿ ಮಾಹಿತಿ ನೀಡಿದರು.