ಸಚಿವ ಸಿಟಿ ರವಿ ರಾಜೀನಾಮೆ: ಅಂಗೀಕಾರವಿನ್ನೂ ಆಗಿಲ್ಲ

ಬೆಂಗಳೂರು: ಪ್ರವಾಸೋಧ್ಯಮ ಸಚಿವ ಸಿ.ಟಿ.ರವಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇನ್ನೂ ಅಂಗೀಕಾರ ಮಾಡಿಲ್ಲವೆಂದು ಖಚಿತವಾಗಿ ಗೊತ್ತಾಗಿದೆ.
ಇತ್ತೀಚೆಗೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಗೊಂಡ ಹಿನ್ನೆಲೆಯಲ್ಲಿ ನಿನ್ನೆ ಸಚಿವ ಸ್ಥಾನಕ್ಕೆ ಸಿ.ಟಿ.ರವಿ ರಾಜೀನಾಮೆ ನೀಡಿದ್ದಾರೆ.
ಭಾರತೀಯ ಜನತಾ ಪಕ್ಷದಲ್ಲಿನ ಒಬ್ಬರಿಗೆ ಒಂದೇ ಸ್ಥಾನ ಎನ್ನುವುದರ ಹಿನ್ನೆಲೆಯಲ್ಲಿ ಈ ತೀರ್ಮಾನವನ್ನ ರವಿ ತೆಗೆದುಕೊಂಡಿದ್ದು, ಸಿಎಂ ಯಡಿಯೂರಪ್ಪ ಹೈಕಮಾಂಡ್ ಗಮನಕ್ಕೆ ತಂದು ತದನಂತರ ತೀರ್ಮಾನ ತೆಗೆದುಕೊಳ್ಳಲಿದ್ದಾರೆಂದು ಗೊತ್ತಾಗಿದೆ.
ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಗಳು ಆಗುತ್ತವೆ ಎಂದು ಹೇಳಲಾಗುತ್ತಾದರೂ, ಯಾವ ಯಾವ ರೂಪದಲ್ಲಿ ಬದಲಾವಣೆಗಳು ಆಗುತ್ತವೆ ಎಂಬುದು ಗೊತ್ತಾಗಿರಲಿಲ್ಲ. ಇದೀಗ ಮಂತ್ರಿ ಮಂಡಲ ಪುನರ್ ರಚನೆಯ ದಿನಾಂಕ ಸಮೀಪಿಸುತ್ತಿದ್ದಂತೆ ಇವೆಲ್ಲವೂ ನಡೆಯುತ್ತಿವೆ.