ಸಿಲಿಂಡರ್ ಸೋರಿಕೆ ದುರಂತ: ಮತ್ತೋರ್ವ ಅಯ್ಯಪ್ಪಸ್ವಾಮಿ ಮಾಲಾಧಾರಿ ಸಾವು- 7ಕ್ಕೇರಿದ ಮರಣದ ಸಂಖ್ಯೆ….
1 min readಹುಬ್ಬಳ್ಳಿ: ಉಣಕಲ್‌ನ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಗ್ಯಾಸ್ ಸಿಲಿಂಡರ್ ಸೋರಿಕೆ ಪ್ರಕರಣದಲ್ಲಿ ಮತ್ತೋರ್ವ ಮಲಾಧಾರಿ ಸಾವಿಗೀಡಾಗಿದ್ದು, ಸತ್ತವರ ಸಂಖ್ಯೆ ಏಳಕ್ಕೇರಿದೆ.
ತೇಜಸ್ ಸತಾರೆ ಎಂಬ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದು, ತೇಜಸ್ ಹೊಟೇಲ್‌ನಲ್ಲಿ ಕುಕ್ ಆಗಿ ಕೆಲಸ ಮಾಡುತ್ತಿದ್ದ. ಘಟನೆಯಲ್ಲಿ ಇನ್ನೋರ್ವನ ಸ್ಥಿತಿಯೂ ಗಂಭೀರವಾಗಿದೆ.
ಘಟನೆಯ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮೃತ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಕುಟುಂಬಕ್ಕೆ ಸರಕಾರ ಐದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.