ಧಾರವಾಡ ಜಿಲ್ಲೆಯಲ್ಲಿ “ಟಫ್ ರೂಲ್ಸ್” ಜಾರಿ: ಜಿಲ್ಲಾಧಿಕಾರಿ ನಿತೇಶ ಪಾಟೀಲ…

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಡಿಸಿ ನೇತೃತ್ವದಲ್ಲಿ ಮಾಲ್, ಮಲ್ಟಿಫ್ಲೆಕ್ಸ್, ಬಾರ್, ರೆಸ್ಟೋರೆಂಟ್, ಸಿನಿಮಾ ಹಾಗೂ ಜಿಮ್ ಮಾಲೀಕರ ಜೊತೆ ಸಭೆ ನಡೆಸಲಾಯಿತು.
ಧಾರ್ಮಿಕ ಮುಖಂಡರ ಜೊತೆಯೂ ಸಭೆ ನಡೆಸಿದ ಸಭೆ ನಂತರ ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿಕೆ ನೀಡಿದ್ದು ಹೀಗೆ..
ಇನ್ನುಂದೆ ಚಿತ್ರಮಂದಿರದಲ್ಲಿ ಚಿತ್ರ ವೀಕ್ಷಣೆಗೆ ಎರಡು ಡೋಸ್ ಲಸಿಕೆ ಕಡ್ಡಾಯ. ಟಿಕೆಟ್ ವಿತರಣೆ ವೇಳೆಯೇ ಲಸಿಕೆ ಪಡೆದ ಬಗ್ಗೆ ಪರಿಶೀಲನೆ ಮಾಡಬೇಕು. ಕಲ್ಯಾಣ ಮಂಟಪಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಳ್ಳಲು ಸೂಚನೆ ನೀಡಿದರು.
ಎಸ್ ಡಿಎಂ ಆಸ್ಪತ್ರೆಯಲ್ಲಿ ಮಹಾರಾಷ್ಟ್ರ ಹಾಗೂ ಕೇರಳದ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅವರು ಮಹಾರಾಷ್ಟ್ರ ಓಡಾಟ ಮಾಡಿದ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ಇದೆ. ಅವರನ್ನ ಐಸೋಲೇಟ್ ಮಾಡಲಾಗಿದೆ. ಅವರ ಜೊತೆ ಬಂದವರಿಂದ ಕೋವಿಡ್ ಸೋಂಕು ಹರಡಿದೆ. ಎಸ್ ಡಿಎಂ ಆಸ್ಪತ್ರೆಯಲ್ಲಿ ಸೋಂಕು ಹತೋಟಿಗೆ ತರಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
240 ಟೆಸ್ಟ್ ಗಳನ್ನ ಪರೀಕ್ಷೆಗೆ ಕಳುಹಿಸಲಾಗಿದೆ. ಜಿಲ್ಲೆಯ ಎಲ್ಲ ಕಾಲೇಜು, ಹಾಸ್ಟೇಲ್ ಗಳಲ್ಲಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡುತ್ತೇವೆ. ಜಿಲ್ಲೆಯಲ್ಲಿ ಮತ್ತೆ ಮಾಸ್ಕ್ ಕಡ್ಡಾಯ ಮಾಡಲಾಗುತ್ತಿದೆ. ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲಾಗುತ್ತದೆ ಎಂದರು.