Posts Slider

Karnataka Voice

Latest Kannada News

ಜನ ಭಾಗಿದಾರಿ ಕಲ್ಪನೆಯಡಿ “ಕೋರೊನಾ ಮುಕ್ತ ಗ್ರಾಮ” – ನಿಮ್ಮೂರಲ್ಲಿ ರೆಡಿ ಇದ್ದೀರಾ…!

Spread the love

ಧಾರವಾಡ: ಪ್ರಧಾನ ಮಂತ್ರಿಗಳು ತಿಳಿಸಿರುವಂತೆ ಜನ ಭಾಗಿದಾರಿ ಕಲ್ಪನೆಯಡಿ ಜಿಲ್ಲೆಯಲ್ಲಿನ ಗ್ರಾಮೀಣ ಭಾಗಗಳಲ್ಲಿ ಎಲ್ಲ ಜನಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ಸಹಯೋಗದಲ್ಲಿ ಕೋರೊನಾ ಮುಕ್ತ ಗ್ರಾಮ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು ಮತ್ತು ಈ ಕುರಿತು ಮಾರ್ಗಸೂಚಿಗಳಿರುವ ಪ್ರತ್ಯೆಕವಾದ ಪತ್ರವನ್ನು ಎಲ್ಲ ಗ್ರಾಮ ಪಂಚಾಯತಿಗಳಿಗೆ ಶೀಘ್ರದಲ್ಲಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಜರುಗಿದ ವಿಡಿಯೋ ಸಂವಾದ ಕಾರ್ಯಕ್ರಮದ ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ ಮಾತನಾಡಿದರು.

ಕೋರೋನಾ ಮುಕ್ತ ಗ್ರಾಮ ಅಭಿಯಾನವನ್ನು ಜನಪ್ರತಿನಿಧಿಗಳ ಸಹಭಾಗಿತ್ವದಲ್ಲಿ ಯಶಸ್ವಿಗೊಳ್ಳಿಸಲು ಕ್ರಮಕೈಗೊಳ್ಳಲಾಗುವುದು. ಅಭಿಯಾನದಲ್ಲಿ ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಪಿಡಿಓ, ಗ್ರಾಮಲೇಕ್ಕಾಧಿಕಾರಿಗಳನ್ನು ಒಳಗೊಂಡ ಕೋವಿಡ್ ಕಾರ್ಯ ಪಡೆ ಮೂಲಕ ಕೊವಿಡ್ ನಿಯಂತ್ರಿಸುವ ಕಾರ್ಯ ಮಾಡಲಾಗುವುದು ಎಂದು ಅವರು ಹೇಳಿದರು.

ಗ್ರಾಮ ಪಂಚಾಯತಿಗಳು ಗ್ರಾಮ ಸಭೆಯಲ್ಲಿ ಠರಾವ್ ಮಾಡುವ ಮೂಲಕ ತಮ್ಮ ಗ್ರಾಮ ವ್ಯಾಪ್ತಿಯಲ್ಲಿ ಲಾಕ್‍ಡೌನ್ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸುವ, ಕೋವಿಡ್ ಮುಂಜಾಗೃತಾ ಕ್ರಮಕೈಗೊಳ್ಳುವ ಹಾಗೂ ಒಂದು ಸ್ಥಳ ಅಥವಾ ಕಟ್ಟಡದಲ್ಲಿ ಐದು ಅಥವಾ ಐದಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳು ಕಂಡುಬಂದಲ್ಲಿ ಕೋವಿಡ್ ಮಾರ್ಗಸೂಚಿ ಪ್ರಕಾರ ಅದನ್ನು ಮೈಕ್ರೋ ಕಂಟೋನ್ಮೆಂಟ್ ಹಾಗೂ  ಕಂಟೋನ್ಮೆಂಟ್ ಪ್ರದೇಶಗಳೆಂದು ಗುರುತಿಸಿ ಹೆಚ್ಚು ಕಠಿಣ ಕ್ರಮಗಳನ್ನು ಕೈಗೊಳ್ಳುವ ನಿರ್ಧಾರವನ್ನು ಮಾಡಬಹುದು.

ಗ್ರಾಮ ಮಟ್ಟದಲ್ಲಿ ಎಲ್ಲರನ್ನು ಒಗ್ಗುಡಿಸುವ ಮೂಲಕ ಕೋರೋನಾ ಕುರಿತ ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸಿ,  ಸ್ಥಳದಲ್ಲಿಯೆ ಅಗತ್ಯ ಸಲಹೆ ನೀಡಿ, ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಗ್ರಾಮ ಪಂಚಾಯತ ಪ್ರತಿನಿಧಿಗಳು ತಮ್ಮ ಗ್ರಾಮಸ್ಥರ ಸಹಕಾರದೊಂದಿಗೆ ಗ್ರಾಮವನ್ನು ಕೋರೊನಾದಿಂದ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಅವರಿಗೆ ಅಗತ್ಯವಿರುವ ಔಷಧಿ, ಚಿಕಿತ್ಸಾ ಸೌಲಭ್ಯ, ವೈದ್ಯಕೀಯ ಅನುಕೂಲತೆಗಳನ್ನು ಆರೋಗ್ಯ ಇಲಾಖೆಯಿಂದ ಕಲ್ಪಿಸಿ, ಕ್ರಮಕೈಗೊಳ್ಳಲಾಗುವುದು. ಗ್ರಾಮ ಸಶಕ್ತಿಕರಣದ ಮೂಲಕ ಕೋರೋನಾ ಮುಕ್ತ ಗ್ರಾಮ ಅಭಿಯಾನವನ್ನು ಪರಿಣಾಮಕಾರಿಯಾಗಿ ಮಾಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು.

          ಪ್ರತಿ ಪ್ರಾಥಮಿಕ ಆರೋಗ್ಯ ಕೆಂದ್ರಕ್ಕೆ ಸೌಲಭ್ಯ:

ಪ್ರತಿ ಗ್ರಾಮ ಪಂಚಾಯತಿಗಳು ಒಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಒಳಪಡುತ್ತವೆ. ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೆಂದ್ರಗಳಿಗೆ ಸ್ಥಳದಲ್ಲಿಯೆ ಕೋವಿಡ್ ಪರೀಕ್ಷೆ ಮಾಡಲು ತಲಾ 50 ರ್ಯಾಟ್‍ಕಿಟ್, ಒಂದು ಆಕ್ಸಿಜನ್ ಕಾನ್ಸಂಟ್ರೇಟರ್ ನೀಡಲಾಗುತ್ತಿದೆ. ಮತ್ತು ಈಗಾಗಲೆ ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗಾಗಿ 6 ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ. ಮತ್ತು ಕೋವಿಡ್ ಚಿಕಿತ್ಸೆಗೆ ಬಳಸುವ ಔಷಧಿಗಳಿರುವ 100 ಔಷಧಿ ಪಾಕೆಟ್‍ಗಳನ್ನು ಕೋವಿಡ್ ಸೋಂಕಿತರಿಗೆ ವಿತರಿಸಲು ನೀಡಲಾಗುವುದು.

ಹೊಬಳಿಗೊಂದು ಕೋವಿಡ್ ಕೆರಸೇಂಟರ್ ಆರಂಭಿಸಲು ಕ್ರಮ : ಈಗಾಗಲೆ ಪ್ರತಿ ತಾಲೂಕಿಗೆ 50 ಬೆಡ್‍ಗಳಿರುವ ಒಂದು ಕೋವಿಡ್ ಕಾಳಜಿ ಕೇಂದ್ರವನ್ನು ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ತಾಲೂಕಾ ಕೇಂದ್ರದಲ್ಲಿರುವ ಹೊಬಳಿಯನ್ನು ಹೊರತುಪಡಿಸಿ, ಉಳಿದ ಎಲ್ಲ ಹೊಬಳಿಗಳಲ್ಲಿ ತಲಾ ಒಂದರಂತೆ ಸುಮಾರು 25 ರಿಂದ 30 ಬೆಡ್‍ಗಳು ಇರುವ ಕೋವಿಡ್ ಕಾಳಜಿ ಕೇಂದ್ರವನ್ನು ಆರಂಭಿಸಲು ಕ್ರಮಕೈಗೊಳ್ಳಲಾಗುವುದು.

          ಎಂಬಿಬಿಎಸ್ ವಿದ್ಯಾರ್ಥಿಗಳ ನಿಯೋಜನೆಗೆ ನಿರ್ಧಾರ:

ಹೋಮ್ ಐಸೋಲೆಷನಲ್ಲಿರುವ ಸೊಂಕಿತರಿಗೆ ಅಗತ್ಯ ಚಿಕಿತ್ಸೆ, ಔಷಧಿ ಮತ್ತು ಕೋವಿಡ್ ಸುರಕ್ಷತಾ ಕ್ರಮಗಳ ಮಾಹಿತಿಯನ್ನು ನೀಡಲು ಎಂಬಿಬಿಎಸ್ ವೈದ್ಯಕೀಯ ಪದವಿಯ ಅಂತಿಮ ವರ್ಷದ ಆರಂಭದಲ್ಲಿ 25 ವಿಧ್ಯಾರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ತಿರ್ಮಾನಿಸಲಾಗಿದೆ. ಅವರಿಗೆ ಮಾಸಿಕ 15,000 ರೂ. ಗೌರವಧನ ನೀಡಲಾಗುವದು.

                   ವಿಶೇಷ ಚೇತನರಿಗೆ ಲಿಸಿಕೆ ನೀಡಲು ಕ್ರಮ:

ಜಿಲ್ಲೆಯ ವಿಶೇಷ ಚೇತನರಿಗೆ ಕೋವಿಡ್ ರೋಗ ನಿರೋಧಕ ಲಸಿಕೆ ನೀಡುವಲ್ಲಿ ಆದ್ಯತೆ ನೀಡಲಾಗುವುದು. ಸರತಿ ಸಾಲಿನಲ್ಲಿ ನಿಲ್ಲದೆ ನೇರವಾಗಿ ಲಸಿಕೆ ಪಡೆಯಬಹುದು. ಜನದಟ್ಟನೆಯನ್ನು ಕಡಿಮೆ ಮಾಡಲು ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಲಸಿಕೆ ನೀಡುವುದನ್ನು ನಿಲ್ಲಿಸಿ ಅದರ ಬದಲಾಗಿ ಲ್ಯಾಮಿಂಗ್‍ಟನ್ ಶಾಲೆಯಲ್ಲಿ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಲಸಿಕೆ ಪಡೆಯುವವರಿಗಾಗಿ ಪ್ರತಿ ಲಸಿಕಾ ಕೇಂದ್ರದಲ್ಲಿ ಟೊಕನ್ ವ್ಯವಸ್ಥೆಯನ್ನು ಮಾಡಲಾಗಿದ್ದು, ಒಟ್ಟು ಟೊಕನ್‍ಗಳ ಪೈಕಿ  ಅರ್ಧದಷ್ಟನ್ನು ಬೆಳಿಗ್ಗೆ 9:30 ಗಂಟೆಗೆ ಮತ್ತು ಉಳಿದ ಅರ್ಧದಷ್ಟನ್ನು ಮಧ್ಯಾಹ್ನ 12 ಗಂಟೆಗೆ  ವಿತರಿಸಲು ಸೂಚಿಸಲಾಗಿದೆ. ಎರಡು ಹಂತಗಳಲ್ಲಿ ಟೋಕನ್ ವಿತರಿಸುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.

ತಾಲೂಕಾ ಮಟ್ಟದಲ್ಲಿ ಪ್ರತ್ಯೇಕ ಕಂಟ್ರೋಲ್ ರೂಮ್, ಅಂಬ್ಯುಲೆನ್ಸ್ ವ್ಯವಸ್ಥೆ: ಈಗಾಗಲೇ ಜಿಲ್ಲಾ ಮಟ್ಟದಲ್ಲಿ  ಕೋವಿಡ್ ಮಾಹಿತಿಗಾಗಿ ಕಂಟ್ರೋಲ್ ರೂಮ್, ಸಹಾಯವಾಣಿ ಕೇಂದ್ರಗಳನ್ನು ಆರಂಭಿಸಿ ಯಶಸ್ವಿಯಾಗಿ ನಿರ್ವಹಿಸಲಾಗುತ್ತಿದೆ. ಅದರಂತೆ ಪ್ರತಿ ತಾಲೂಕಾ ಮಟ್ಟದಲ್ಲಿ ಕಂಟ್ರೋಲ್ ರೂಮ್, ಹೆಲ್ಪ್‍ಡೆಸ್ಕ್‍ಗಳನ್ನು ಆರಂಭಿಸಲು ಕ್ರಮಕೈಗೊಳ್ಳಲಾಗುತ್ತಿದೆ.

ಪ್ರತಿ ತಾಲೂಕಾ ಆಸ್ಪತ್ರೆಗೆ 108 ಅಂಬ್ಯುಲೆನ್ಸ್ ವಾಹನ ಇದೆ. ಕೋವಿಡ್ ಸೋಂಕಿತರನ್ನು ತಕ್ಷಣಕ್ಕೆ ಆಸ್ಪತ್ರೆ ಅಥವಾ ಕೋವಿಡ್ ಕಾಳಜಿ ಕೇಂದ್ರಕ್ಕೆ ತಲುಪಿಸಲು ಮತ್ತು ಕೋವಿಡ್ ಸೋಂಕಿನಿಂದ ಮೃತರಾದವರನ್ನು ಸಾಗಿಸಲು ಅನುಕೂಲವಾಗುವಂತೆ ಪ್ರತಿ ತಾಲೂಕಿಗೆ ಒಂದರಂತೆ ಹೆಚ್ಚುವರಿಯಾಗಿ ಅಂಬ್ಯುಲೆನ್ಸ್‍ಗಳನ್ನು ನೀಡಲಾಗಿದೆ.  ತಾಲೂಕುಗಳಲ್ಲಿ ಆರಂಭಿಸಲಿರುವ ಕಂಟ್ರೋಲ್ ರೂಮ್, ಸಹಾಯವಾಣಿ ಕೇಂದ್ರಗಳ ದೂರವಾಣಿ ಸಂಖ್ಯೆಗಳನ್ನು ಸದ್ಯದಲ್ಲಿ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.

ಆಕ್ಸಿಜನ್ ಬಪರ್‍ಸ್ಟಾಕ್‍ಗಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ನೇತ್ರತ್ವದಲ್ಲಿ ತಂಡವನ್ನು ರಚಿಸಲಾಗಿದ್ದು ಈ ತಂಡ ಎಲ್ಲ ರೀತಿಯಲ್ಲಿ ಆಕ್ಸಿಜನ್ ಬಪರ್ ಸ್ಟಾಕ್ ಮಾಡಿ ಉತ್ತಮ ಕಾರ್ಯ ನಿರ್ವಹಿಸುತ್ತಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ಆಕ್ಸಿಜನ್ ನರ್ಸ್ ಮತ್ತು ಆಕ್ಸಿಜನ್ ಬಾಯ್ಸ್ ,ಆಕ್ಸಿಜನ್ ಆಡಿಟರ್‍ಗಳನ್ನು  ನೇಮಕ ಮಾಡಲಾಗಿದೆ. ಇದರಿಂದ ಕಡಿಮೆ ಆಕ್ಸಿಜನ್ ನಲ್ಲಿ ಹೆಚ್ಚಿನ ಸೋಂಕಿತರಿಗೆ ಚಿಕಿತ್ಸೆ ನೀಡಲು ಇದು ಸಹಾಯಕವಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಮಹಾನಗರ ಪೊಲೀಸ್ ಆಯುಕ್ತ ಲಾಬೂರಾಮ್ ಅವರು ಮಾತನಾಡಿ, ಅವಳಿನಗರದಲ್ಲಿ ಲಾಕ್‍ಡೌನ್‍ನನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುತ್ತಿದೆ. ಅನಗತ್ಯವಾಗಿ ಸಂಚರಿಸುವ ವಾಹನ ಸವಾರರಿಗೆ ಕೋವಿಡ್ ಟೆಸ್ಟ್ ಮಾಡಲು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ 2 ಪ್ರತ್ಯೇಕವಾಗಿ ಟೆಸ್ಟಿಂಗ್ ತಂಡಗಳನ್ನು ನಿಯೋಜಿಸಿ, ಪೊಲೀಸ್ ಕರ್ತವ್ಯನಿರತ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ನಿರ್ವಹಿಸಬೇಕೆಂದು ಅವರು ಸೂಚಿಸಿದರು.

ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿವಾಹಕ ಅಧಿಕಾರಿ ಡಾ.ಸುಶೀಲಾ.ಬಿ. ಅವರು ಮಾತನಾಡಿ, ಗ್ರಾಮ ಮಟ್ಟದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಕಾರ್ಯಪಡೆಗಳನ್ನು  ರಚಿಸಲಾಗಿದೆ. ಮತ್ತು ಗ್ರಾಮದ ಪ್ರತಿ ಓಣಿಗಳಲ್ಲಿ ಸಂಚರಿಸಿ ಕೋವಿಡ್ ಮಾರ್ಗಸೂಚಿಗಳ ಕುರಿತು ಮತ್ತು ಸೋಂಕಿತರಿಗೆ ಚಿಕಿತ್ಸೆ,  ಕಾಳಜಿ ಕೇಂದ್ರಗಳ ಕುರಿತು ಮಾಹಿತಿ ನೀಡಲಾಗುತ್ತಿದೆ. ಕೋವಿಡ್ ಟೆಸ್ಟಿಂಗ್ ಮತ್ತು ಲಸಿಕೆ ವಿತರಣೆಗೆ ಆದ್ಯತೆ ನೀಡಲಾಗಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಮಹಾನಗರ ಪಾಲಿಕೆ  ಆಯುಕ್ತ ಡಾ.ಸುರೇಶ ಇಟ್ನಾಳ,  ಉಪವಿಭಾಗಾಧಿಕಾರಿ ಡಾ.ಗೋಪಾಲ ಕೃಷ್ಣ.ಬಿ., ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಯಶವಂತ ಮದೀನಕರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಕುಮಾರ ಮಾನಕರ, ಡಿಮ್ಹಾನ್ಸ್ ನೋಡಲ್ ಅಧಿಕಾರಿ ಡಾ. ರಾಘವೆಂದ್ರ ನಾಯಕ, ಆರ್‍ಸಿಎಚ್‍ಓ ಡಾ.ಎಸ್.ಎಂ.ಹೋನಕೇರಿ, ಡಿಎಸ್‍ಓ ಡಾ.ಸುಜಾತಾ ಹಸವಿಮಠ, ಡಾ.ಶಶಿ ಪಾಟೀಲ, ಡಾ.ಲಕ್ಷ್ಮೀಕಾಂತ ಲೊಕರೆ ಸೇರಿದಂತೆ ಇತರರು ಇದ್ದರು.


Spread the love

Leave a Reply

Your email address will not be published. Required fields are marked *

You may have missed