ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎರಡು ದಿನ ಸೀಲ್ ಡೌನ್: ಐವರಿಗೆ ಕೊರೋನಾ

ಧಾರವಾಡ: ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಐವರು ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ, ಕಚೇರಿಯನ್ನು ಸ್ಯಾನಿಟೈಸೇಷನ್ ಮಾಡಲಾಗಿದ್ದು,ಮಂಗಳವಾರ ಮತ್ತು ಬುಧವಾರ ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಕಚೇರಿಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದ ಐವರಿಗೆ ಕೊರೋನಾ ಬಂದಿದ್ದು, ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಅವರಿಗೆ ಪಾಸಿಟಿವ್ ಬಂದ ನಂತರ ಕಚೇರಿಯನ್ನ ಸಂಪೂರ್ಣವಾಗಿ ಸ್ಯಾನಿಟೈಸರ್ ಮಾಡಲಾಗಿದ್ದು, ಎರಡು ದಿನ ಸಂಪೂರ್ಣ ಕ್ಲೋಸ್ ಮಾಡಲು ತೀರ್ಮಾನಿಸಲಾಗಿದೆ.