ರಸ್ತೆಗಿಳಿದ ಧಾರವಾಡ ಜಿಲ್ಲಾಧಿಕಾರಿ- ಪಕ್ಕದಲ್ಲೇ ರಸೀದಿ
ಧಾರವಾಡ: ಜಿಲ್ಲೆಯಲ್ಲಿ ಪ್ರತಿದಿನವೂ ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಿದ್ದು, ಇದಕ್ಕಾಗಿ ಜಾಗೃತಿಗಾಗಿ ಜಿಲ್ಲಾಡಳಿತ ಹೊಸ ರೂಪವನ್ನ ಆರಂಭಿಸಿದ್ದು, ಅದಕ್ಕಾಗಿಯೇ ಜಿಲ್ಲಾಧಿಕಾರಿ ನಿತೇಶ ಪಾಟೀಲ ರಸ್ತೆಗಿಳಿದಿದ್ದರು.
ಸಾರ್ವಜನಿಕರಿಗೆ ಎಷ್ಟೇ ತಿಳಿವಳಿಕೆ ನೀಡಿದರೂ ಪ್ರಯೋಜನವಾಗುತ್ತಿಲ್ಲ. ಮಾಸ್ಕ್ ಧರಿಸುವುದನ್ನ ಕಡ್ಡಾಯ ಮಾಡಿದ್ರೂ ಜನರು ಮಾಸ್ಕ್ ಧರಿಸಿ ಸಂಚಾರ ಮಾಡುತ್ತಿಲ್ಲವಾದ್ದರಿಂದ ಜಿಲ್ಲಾಡಳಿತ, ಮಾಸ್ಕ್ ಇಲ್ಲದೇ ಸಂಚರಿಸುವ ಜನರನ್ನ ಕೋವಿಡ್-19 ತಪಾಸಣೆಗೆ ಒಳಪಡಿಸುವುದಕ್ಕೆ ಮುಂದಾಗಿದ್ದಾರೆ.
ಜನರನ್ನ ತಪಾಸಣೆ ನಡೆಸುವ ಕಾರ್ಯ ಹೇಗೆ ನಡೆಯುತ್ತಿದೆ ಎಂದು ತಿಳಿದುಕೊಳ್ಳಲು ಸ್ವತಃ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ರಸ್ತೆಗಿಳಿದು ಪರಿಶೀಲನೆ ನಡೆಸಿದರು.
ನಗರದ ಸಿಬಿಟಿ, ಸುಭಾಷ್ ರಸ್ತೆ,ಜೈನ್ ಮಂದಿರ ಮತ್ತಿತರ ಪ್ರದೇಶದಲ್ಲಿ ನಡೆದ ಕಾರ್ಯಚಾರಣೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಭಾಗವಹಿಸಿ ಮಾಸ್ಕ್ ಧರಿಸದ ವ್ಯಕ್ತಿಗಳನ್ನು ಕೋವಿಡ್ ತಪಾಸಣೆಗೊಳಪಡಿಸಿದರು.