ಧಾರವಾಡದ ಬಳಿ ಕಾರು ಪಲ್ಟಿ: ಡಿಸಿ ಸಮೇತ ಪ್ಯಾಮಿಲಿ ಪವಾಡಸದೃಶ್ಯ ರೀತಿಯಲ್ಲಿ ಪಾರು...!
1 min readಧಾರವಾಡ: ಅಧಿಕಾರ ವಹಿಸಿಕೊಳ್ಳಲು ವಿಜಯಪುರಕ್ಕೆ ಕುಟುಂಬ ಸಮೇತ ಹೊರಟಿದ್ದ ಐಎಎಸ್ ಅಧಿಕಾರಿಯಿದ್ದ ಕಾರೊಂದು ಪಲ್ಟಿಯಾದ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪದ ಬಳಿ ಸಂಭವಿಸಿದ್ದು, ಪವಾಡಸದೃಶ್ಯ ರೀತಿಯಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರಿನಲ್ಲಿದ್ದ ಐಎಎಸ್ ಅಧಿಕಾರಿ ವಿಜಯಮಹಾಂತೇಶ ದಾನಮ್ಮನವರ, ಪತ್ನಿ ಶ್ವೇತಾ, ಮಕ್ಕಳಾದ ತನ್ವಿ, ವಿಹಾನ್ ಹಾಗೂ ಪ್ರವಿಣಕುಮಾರ ಕಾರಿನಲ್ಲಿದ್ದವರು. ಬೆಳಗಿನ 5.30 ಕ್ಕೆ ಘಟನೆ ನಡೆದಿದ್ದು, ಎಲ್ಲರನ್ನೂ ಎಸ್ ಡಿ ಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದಾವಣಗೆರೆ ಜಿಲ್ಲಾ ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಯಾಗಿದ್ದ ವಿಜಯಮಹಾಂತೇಶ ದಾನಮ್ಮನವರ ಅವರ ವರ್ಗಾವಣೆ ಆದೇಶ ನಿನ್ನೆಯಷ್ಟೇ ಬಂದಿತ್ತು. ವಿಜಯಪುರ ಜಿಲ್ಲಾಧಿಕಾರಿಯಾಗಲು ಹೊರಟಿದ್ದ ಸಮಯದಲ್ಲಿಯೇ ದುರ್ಘಟನೆ ನಡೆದಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿ, ಮುಂದಿನ ಕ್ರಮವನ್ನ ಜರುಗಿಸಿದ್ದಾರೆ.
ಯರಿಕೊಪ್ಪ ಕ್ರಾಸ್ ಬಳಿಯಲ್ಲಿ ಎದುರಿಗೆ ಬಂದ ಎರಡು ಲಾರಿಯನ್ನ ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.