ಕಾರು ಬಸ್ ಡಿಕ್ಕಿ: ಚಿತ್ರದುರ್ಗ ಜಿಲ್ಲಾಧಿಕಾರಿ ಪ್ರಾಣಾಪಾಯದಿಂದ ಪಾರು

ಚಿತ್ರದುರ್ಗ: ಜಿಲ್ಲಾಧಿಕಾರಿ ಕಾರಿಗೆ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ ಜಿಲ್ಲಾಧಿಕಾರಿ ಕಾರು ನಜ್ಜುಗುಜ್ಜಾಗಿದ್ದು, ಅದೃಷ್ಟ ವಶಾತ್ ಜಿಲ್ಲಾಧಿಕಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಡಿಸಿ ವಿನೋತ್ ಪ್ರಿಯಾಗೆ ಯಾವುದೇ ಪ್ರಾಣಾಪಾಯ ಸಂಬವಿಸಿಲ್ಲ. ರಸ್ತೆಯಲ್ಲಿ ಅಡ್ಡಬಂದ ಹಸು ತಪ್ಪಿಸಲು ಹೋಗಿ ಅಪಘಾತವಾಗಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಶಿವಗಂಗ ಪೆಟ್ರೋಲ್ ಬಂಕ್ ಬಳಿ ಘಟನೆ ನಡೆದಿದೆ.
ಚಿತ್ರದುರ್ಗದಿಂದ ಹೊಳಲ್ಕೆರೆಗೆ ಹೋಗುವಾಗ, ಹೊಳಲ್ಕೆರೆಯಿಂದ ಚಿತ್ರದುರ್ಗಕ್ಕೆ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ವಿನೋತ್ ಪ್ರಿಯಾ, ಚಾಲಕ, ಗನ್ ಮ್ಯಾನ್ ಕೂಡಾ ಕ್ಷೇಮವಾಗಿದ್ದು ಸ್ಥಳಕ್ಕೆ ಎಸ್ಪಿ ರಾಧಿಕಾ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.