ರೈತ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ: ದೇಶದ ಬೆನ್ನಲುಬಿನ ಸಂಕಷ್ಟ ಆಲಿಕೆ
ಹುಬ್ಬಳ್ಳಿ: ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್, ಶಿರುಗುಪ್ಪಿ ಹಾಗೂ ಅಣ್ಣಿಗೇರಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ರೈತರು ಶೇಂಗಾ, ಸೋಯಾಬಿನ್, ಹೆಸರು ಹಾಗೂ ಇತರೆ ಬೀಜಗಳನ್ನು ಖರೀದಿಸುತ್ತಿದ್ದಾರೆ. ಕೊರೋನಾ ಲಾಕ್ ಡೌನ್ ನಂತರ ಕೃಷಿ ಚಟುವಟಿಕೆಗಳು ಗರಿಗೆದರಿವೆ.
ಬಿತ್ತನೆ ಬೀಜ ವಿರಣೆಯಲ್ಲಿ ರೈತರಿಗೆ ಯಾವುದೇ ತೊಂದರೆಯಾಗಬಾರದು. ಅಗತ್ಯ ಪ್ರಮಾಣದ ಬಿತ್ತನೆ ಬೀಜ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ರೈತರೊಂದಿಗೆ ಮಾತನಾಡಿದ ಅವರು ಬಿತ್ತನೆ ಬೀಜ ಕೊರತೆ ಇಲ್ಲ. ರೈತರು ಸಾಮಾಜಿಕ ಅಂತರ ಕಾಪಾಡಿಕೊಂಡು ಬಿತ್ತನೆ ಬೀಜ ಕೊಂಡುಕೊಳ್ಳಬೇಕು ಎಂದು ಹೇಳಿದರು.
ಜಿ.ಪಂ.ಸಿಇಓ ಡಾ.ಬಿ.ಸಿ. ಸತೀಶ್, ಉಪ ವಿಭಾಗಾಧಿಕಾರಿ ಮಹಮದ್ ಜುಬೇರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ ಐ ಬಿಜಾಪುರ, ತಹಶೀಲದಾರರುಗಳಾದ ಶಶಿಧರ ಮಾಡ್ಯಾಳ, ಪ್ರಕಾಶ್ ನಾಸಿ, ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಆರ್.ಎ.ಅಣಗೌಡರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.