ಆತ್ಮಹತ್ಯೆಯಾಗಿದ್ದರೂ ಮತದಾನ ನಿಲ್ಲೋದಿಲ್ಲ: ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿಕೆ
1 min readಧಾರವಾಡ: ತಾಲೂಕಿನ ಗರಗ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅಭ್ಯರ್ಥಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿಕೆ ನೀಡಿದ್ದು, ಯಾವುದೇ ಕಾರಣಕ್ಕೂ ಮತದಾನ ನಿಲ್ಲೋದಿಲ್ಲವೆಂದು ಹೇಳಿದರು.
ಜಿಲ್ಲಾಧಿಕಾರಿ ಹೇಳಿದ್ದೇನು..
ಚುನಾವಣೆಗಳ ಬಗ್ಗೆ ವೀಕ್ಷಣೆ ಮಾಡುವ ಸಮಯದಲ್ಲಿ ಮಾತನಾಡಿರುವ ಜಿಲ್ಲಾಧಿಕಾರಿ ಪಾಟೀಲ, ಚುನಾವಣಾ ಆಯೋಗದ ಪ್ರಕಾರ ಮತದಾನ ನಡೆಯತ್ತೆ. ಆತ್ಮಹತ್ಯೆ ಮಾಡಿಕೊಂಡರೇ, ಚುನಾವಣೆ ನಿಲ್ಲಿಸುವ ಸಂದರ್ಭ ಬರುವುದಿಲ್ಲ ಎಂದರು.
ಈಗಾಗಲೇ ಈ ಬಗ್ಗೆ ತಹಶೀಲ್ದಾರ ಅವರನ್ನ ಸ್ಥಳಕ್ಕೆ ಕಳಿಸಲಾಗಿದ್ದು, ಚುನಾವಣಾ ಪ್ರಕ್ರಿಯೆಗಳು ಎಂದಿನಂತೆ ನಡೆಯಲಿವೆ. ಮತದಾನ ಮಾಡುವುದಕ್ಕೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಚುನಾವಣಾ ನಿಯಮದಲ್ಲಿ ಇಂತಹ ಘಟನೆಗಳ ಬಗ್ಗೆ ಮೊದಲೇ ಉಲ್ಲೇಖ ಮಾಡಲಾಗಿದ್ದು, ಆ ಕಾರಣಕ್ಕೆ ಈ ಥರದ ಪ್ರಕರಣಗಳು ಮತದಾನದ ಮೇಲೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲವೆಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.