ಸಾಮಾಜಿಕ ನ್ಯಾಯದ ಹರಿಕಾರನಿಗೆ ನಮನ ಸಲ್ಲಿಸಿದ ಕರ್ನಾಟಕ ಸರಕಾರ
ಬೆಂಗಳೂರು: ಸಾಮಾಜಿಕ ನ್ಯಾಯದ ಹರಿಕಾರ, ಪ್ರಗತಿಪರ ಕಾರ್ಯಗಳ ನೇತಾರ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸ್ ಅವರ 38ನೇ ಪುಣ್ಯಸ್ಮರಣೆ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಧಾನಸೌಧ ಪಶ್ಚಿಮ ದ್ವಾರದ ಬಳಿ ಇರುವ ಅರಸು ಅವರ ಪ್ರತಿಮೆಗೆ ಇಂದು ಬೆಳಿಗ್ಗೆ ಪುಷ್ಪ ನಮನ ಸಲ್ಲಿಸಿದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಸೇರಿದಂತೆ ಹಲವರು ಉಪಸ್ಥಿತರಿದ್ದರು. ನಂತರ ಅಲ್ಲಿನ ಉದ್ಯಾನದಲ್ಲಿ ಅವರ ನೆನಪಿಗಾಗಿ ಸಸಿ ನೆಟ್ಟರು.