ಧಾರವಾಡ ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ಕು ಪಾಸಿಟಿವ್ ಪ್ರಕರಣ

ಧಾರವಾಡ: ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಮೂರು ಮತ್ತು ಸಂಜೆ ಮತ್ತೊಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಸಂಜೆ ಪತ್ತೆಯಾದ ಪಿ-2181 (33 ವರ್ಷ,ಪುರುಷ) ಇವರು ಮಹಾರಾಷ್ಟ್ರ ರಾಜ್ಯ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 43 ಕ್ಕೆ ಏರಿಕೆಯಾಗಿದೆ. ಈಗಾಗಲೇ 10 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ . ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಚೋಳನ್ ತಿಳಿಸಿದ್ದಾರೆ.