ಮೊರಬ-ಶಿರಕೋಳದಲ್ಲಿ ಮತ್ತೆ ಕೊರೋನಾ ಪಾಸಿಟಿವ್: ಜಿಲ್ಲೆಯಲ್ಲಿ 465ಕ್ಕೇರಿದ ಪ್ರಕರಣ
ಧಾರವಾಡ: ಕೊರೋನಾ ವೈರಸ್ ಪಾಸಿಟಿವ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಇಂದು ಮತ್ತೆ 38 ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳು 465ಕ್ಕೇರಿಕೆಯಾಗಿವೆ.
ನವಲಗುಂದ ತಾಲೂಕಿನ ಮೊರಬ, ಶಿರಕೋಳದಲ್ಲಿ ತಲಾ ಒಂದೊಂದು ಪ್ರಕರಣಗಳು ಸೇರಿದಂತೆ ಧಾರವಾಡ, ನವಲೂರ, ಹುಬ್ಬಳ್ಳಿ, ಛಬ್ಬಿಯಲ್ಲಿಯೂ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಪ್ರಮುಖ ಸ್ಥಳಗಳಲ್ಲಿ ಈಗಾಗಲೇ ಮುಂಜಾಗೃತೆ ಕ್ರಮಗಳನ್ನ ತೆಗೆದುಕೊಳ್ಳಲಾಗಿದ್ದು, ಪಾಸಿಟಿವ್ ಪತ್ತೆಯಾದ ಸ್ಥಳಗಳಲ್ಲಿ ಸೀಲ್‌ಡೌನ್ ಪ್ರಕ್ರಿಯೆ ಆರಂಭಗೊಂಡಿದೆ.
ಈ ಕುರಿತು ಜಿಲ್ಲಾಧಿಕಾರಿ ನಿತೇಶ ಪಾಟೀಲ ಕಟ್ಟುನಿಟ್ಟಿನ ಕ್ರಮವನ್ನ ತೆಗೆದುಕೊಳ್ಳಲು ಸೂಚಿಸಿದ್ದಾರೆ.