ಧಾರವಾಡ: ಅಪರ ಆಯುಕ್ತೆ ಜಯಶ್ರೀ ಶಿಂತ್ರಿ ಆದೇಶ ಅವೈಜ್ಞಾನಿಕ- ಮಾಧ್ಯಮಿಕ ಸಂಘ…!!!
ಧಾರವಾಡ: ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾದ ಜಯಶ್ರೀ ಶಿಂತ್ರಿ ಅವರು ಹೊರಡಿಸಿರುವ ಆದೇಶ ಅವೈಜ್ಞಾನಿಕವಾಗಿದ್ದು, ತಕ್ಷಣವೇ ಆದೇಶವನ್ನ ಮರುಪರಿಶೀಲನೆ ಮಾಡಬೇಕೆಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಣ ಸಂಘ ಆಗ್ರಹಿಸಿದೆ.
ಇಂದು ಮನವಿ ನೀಡಿರುವ ಸಂಘವೂ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿಯ ಪರೀಕ್ಷೆ ತೆಗೆದುಕೊಳ್ಳಲು ಮುಂದಾಗಿದೆ. ಆದರೆ, ದಿನಕ್ಕೆ ಎರಡು ವಿಷಯದ ಪರೀಕ್ಷೆ ನಡೆಸುತ್ತಿರುವುದು ಅವೈಜ್ಞಾನಿಕ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳ ಮಾನಸಿಕ ಸ್ಥಿತಿ ಏನಾಗಬೇಕು. 80/100 ಅಂಕದ ವಿಷಯಗಳನ್ನ ಒಂದೇ ಎರಡು ತೆಗೆದುಕೊಳ್ಳುವುದು ಸರಿಯಲ್ಲ. ದಿನಕ್ಕೆ ಒಂದು ವಿಷಯದ ಬಗ್ಗೆ ಪರೀಕ್ಷೆ ನಡೆಸುವುದು ಸೂಕ್ತವೆಂದು ಸಂಘದ ರಾಜ್ಯ ಅಧ್ಯಕ್ಷ ಸಂದೀಪ ಬೂದಿಹಾಳ, ರಾಜ್ಯ ಕಾರ್ಯದರ್ಶಿ ಶ್ರ್ರೀಧರ ಪಾಟೀಲ ಕುಲಕರ್ಣಿ ಸೇರಿದಂತೆ ಹಲವರು ಮನವಿ ನೀಡುವ ಸಮಯದಲ್ಲಿ ಉಪಸ್ಥಿತರಿದ್ದರು.