ಧಾರವಾಡದ ಮನಸೂರ- ಗದಗನ ನರಸಾಪುರ ಬಳಿ ಸರಣಿ ರಸ್ತೆ ಅಪಘಾತ: 6ಜನರಿಗೆ ಗಂಭೀರ ಗಾಯ
1 min readಧಾರವಾಡ-ಗದಗ: ತಾಲೂಕಿನ ಮನಸೂರ ಬಳಿ ಕಾರು ಮತ್ತು ಲಾರಿಯ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಗಾಯಗೊಂಡ ಘಟನೆ ಈಗ ಕೆಲವೇ ನಿಮಿಷಗಳ ಹಿಂದೆ ನಡೆದಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಧಾರವಾಡ ಮೂಲದ ಬೇಲೂರ ಪ್ರದೇಶದವರು ಎಂದು ಗೊತ್ತಾಗಿದೆ. ಪ್ರಕರಣವೂ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದ್ದು, ಲಾರಿ ಚಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಅಪಘಾತದಲ್ಲಿ ಎರಡು ವಾಹನಗಳು ಜಖಂಗೊಂಡಿವೆ.
ಗದಗ
ನಗರದ ಹೊರವಲಯದಲ್ಲಿ ಸರಣಿ ಅಪಘಾತವಾಗಿದ್ದು ನಾಲ್ಕು ಜನರಿಗೆ ತೀವ್ರವಾದ ಗಾಯಗಳಾದ ಘಟನೆ ಗದಗ- ಬೆಟಗೇರಿ ಹೊರವಲಯದ ದಂಡಿನ ದುರ್ಗಮ್ಮನ ಗುಡಿ ಹತ್ತಿರ ನಡೆದಿದೆ.
ಸಾರಿಗೆ ಸಂಸ್ಥೆಯ ಬಸ್, ಕಾರು ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದೆ. ಬಸ್, ಟ್ರ್ಯಾಕ್ಟರ್ ಓವರ್ ಟೇಕ್ ಮಾಡಲು ಹೋಗಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ರೋಣದಿಂದ ಗದಗಗೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ನವಲಗುಂದ ತಾಲೂಕಿನ ಶಲವಡಿ ಮೂಲದ ಮಾಳವಾಡ ಎನ್ನುವವರಿಗೆ ಸೇರಿದ ಕಾರಿಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ನಾಲ್ಕು ಜನರಿಗೆ ಗಾಯಗಳಾಗಿದ್ದು, ಅವರನ್ನ ಜಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.