ಧಾರವಾಡ: ಮನೆ ಮನೆ ಗ್ಯಾಸ್ “ಪೈಪ್‌ಲೈನ್” ಸಮಸ್ಯೆ… ರಸ್ತೆಯುದ್ದಕ್ಕೂ ಹರಡಿದ ಬೆಂಕಿ, ಆತಂಕ…!!!

ಧಾರವಾಡ: ಮನೆ ಮನೆಗಳಿಗೆ ನೇರವಾಗಿ ಸಂಪರ್ಕ ಕಲ್ಪಿಸುವ ಗ್ಯಾಸ್ ಪೈಪ್‌ಲೈನ್ ಸೋರಿಕೆಯಿಂದ ರಸ್ತೆಯುದ್ದಕ್ಕೂ ಬೆಂಕಿ ಕಾಣಿಸಿಕೊಂಡ ಘಟನೆ ರಜತಗಿರಿ ಬಡಾವಣೆಯಲ್ಲಿ ಆತಂಕ ಸೃಷ್ಠಿಯಾಗಿದೆ.
ಏಕಕಾಲಕ್ಕೆ ಎರಡು ಕಡೆಗಳಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಇದರಿಂದ ಜನರಲ್ಲಿ ಹೆಚ್ಚಿದ ಆತಂಕ ಮನೆ ಮಾಡಿದ್ದು, ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.