ಧಾರವಾಡದಲ್ಲಿ ಅಪಘಾತ- JSS ಪ್ರಾಶುಂಪಾಲ ರವಿವರ್ಮಾ ಜೋಶಿ ‘ಸ್ವಲ್ಪದರಲ್ಲಿ ಪಾರು’….

ಧಾರವಾಡ: ನಗರದ ಹೊರವಲಯದಲ್ಲಿ ಸರಣಿ ಅಪಘಾತ ನಡೆದಿದ್ದು, ಜೆಎಸ್‌ಎಸ್ ಕಾಲೇಜಿನ ವಿಜ್ಞಾನ ವಿಭಾಗದ ಪ್ರಾಶುಂಪಾಲರು ಸ್ವಲ್ಪದರಲ್ಲಿಯೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪ್ರಾಶುಂಪಾಲ ರವಿವರ್ಮಾ ಜೋಶಿ ಎಂಬುವವರು ಕಾರಿನಲ್ಲಿ ತೆರಳುತ್ತಿದ್ದಾಗ, ಆಟೋ- ಬೈಕಿನ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಜಖಂಗೊಂಡಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೇ ಪೊಲೀಸರು ಸ್ಥಳಕ್ಕೆ ತೆರಳಿ, ವಾಹನಗಳನ್ನ ವಶಕ್ಕೆ ಪಡೆದುಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.