ಧಾರವಾಡ KMFನಲ್ಲಿ “ಹಾಲಾಹಲ”- ಶಿವಳ್ಳಿ ಹಾಲು ಉತ್ಪಾದಕರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ…!!!

ಧಾರವಾಡ: ತಾಲೂಕಿನ ಶಿವಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಆಡಳಿತ ಅಧಿಕಾರಿಯನ್ನ ನೇಮಕ ಮಾಡಿ ಆದೇಶ ಹೊರಡಿಸಲಾಗಿದ್ದು, ಇದು ಧಾರವಾಡ ಕೆಎಂಎಫ್ ಮೇಲೆ ಪರಿಣಾಮ ಬೀಳುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಈಗಾಗಲೇ ಎರಡು ಪ್ರಕರಣಗಳು ನ್ಯಾಯಾಲಯದಲ್ಲಿ ನಡೆಯುತ್ತಿರುವ ಸಮಯದಲ್ಲಿ ಈ ಆದೇಶ ಹೊರಬಂದಿದ್ದು, ತೀವ್ರ ಕೌತುಕ ಮೂಡಿಸಿದೆ.