ಧಾರವಾಡ: ಸರಕಾರಿ ಅಧಿಕಾರಿಗಳ ಮೇಲೆ ಹಲ್ಲೆ, ಜೀವ ಬೆದರಿಕೆ… Exclusive

ಧಾರವಾಡ: ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಕರ್ತವ್ಯ ನಿರತ ಸರಕಾರಿ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿರುವ ಪ್ರಕರಣವೊಂದು ನಡೆದಿದ್ದು, ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಧಾರವಾಡ ಲೈನ್ ಬಜಾರ ನಿವಾಸಿಯಾಗಿರುವ ಅಭಿಷೇಕ ಭಜಂತ್ರಿ ಎಂಬಾತನೇ, ಹಲ್ಲೆ ನಡೆಸಿದ್ದಾನೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ವಿಭಾಗದ ರಂಜಿತಾ, ಗಣೇಶ ದೊಡ್ಡಮನಿ, ಈರಪ್ಪ ಮುದಕಣ್ಣನವರ, ಮೊಹ್ಮದ ತಾಹೀರ ಯಾದವಾಡ ಎಂದು ದೂರು ನೀಡಿದ್ದಾರೆ.
ಈ ಕುರಿತು ಉಪನಗರ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.