ಆಕ್ಸಿಜನ್ ಪೂರೈಕೆಗಾಗಿ ಧಾರವಾಡ ಜಿಲ್ಲಾಡಳಿತದಿಂದ ಟಾಸ್ಕಫೋರ್ಸ್ ಕಮಿಟಿ ರಚನೆ
1 min readಹುಬ್ಬಳ್ಳಿ: ಖಾಸಗಿ ಆಸ್ಪತ್ರೆಗಳಿಗೆ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಪೂರೈಕೆಯ ವ್ಯವಸ್ಥೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಕಮಿಟಿ ರಚನೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಕರೋನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಹಾಗೂ ಕೊರೋನಾಗೆ ತುತ್ತಾದ ರೋಗಿಗಳಿಗೆ ತುರ್ತಾಗಿ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಪೂರೈಕೆಯನ್ನು ನಿರಂತರವಾಗಿಸುವ ನಿಟ್ಟಿನಲ್ಲಿ ಕಮಿಟಿಯನ್ನು ರಚಿಸಲಾಗಿದೆ, ಇದರಲ್ಲಿ ನಗರದ ಸಹಾಯಕ ಡ್ರಗ್ಸ್ ಕಂಟ್ರೋಲರ್ ಮಲ್ಲಿಕಾರ್ಜುನ್ ಕೆ. ಎಸ್. ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಅಪ್ಪಯ್ಯ ನಲ್ವತ್ವಾಡಮಠ, ಬಿ. ಶಂಕ್ರಪ್ಪ ಮತ್ತು ಪ್ರಾದೇಶಿಕ ಸಾರಿಗೆ ಕಛೇರಿ ಧಾರವಾಡ (ಪೂರ್ವ ಮತ್ತು ಪಶ್ಚಿಮ) ದ ಹಿರಿಯ ಮೋಟಾರು ವಾಹನ ನಿರೀಕ್ಷಕರು ಮತ್ತು ಸಿಬ್ಬಂದಿಗಳು ಇರುತ್ತಾರೆ.
ನವನಗರದ ಧಾರವಾಡ ( ಪೂರ್ವ) ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಇಂದಿನಿಂದ 24*7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಿದ್ದು, ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಅಗತ್ಯವಿರುವ ಖಾಸಗಿ ಆಸ್ಪತ್ರೆಗಳು ಮತ್ತು ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 0836-2233925 / 9449864025 ಗೆ ಕರೆ ಮಾಡಬಹುದೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ.