ಧಾರವಾಡ ತಾಲೂಕು ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ದಿನಾಂಕ ನಿಗದಿ: ಜಿಲ್ಲಾಧಿಕಾರಿ ಆದೇಶ

ಧಾರವಾಡ: ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯತಿಗಳಿಗೆ ಈಗಾಗಲೇ ಮೀಸಲಾತಿಯೂ ನಿಗದಿಯಾಗಿದ್ದು, ಫೆಬ್ರುವರಿ 5ರೊಳಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಮಾಡಲು ಅಧಿಕಾರಿಗಳನ್ನ ನೇಮಕ ಮಾಡಿ ಧಾರವಾಡದ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಮೂವತ್ತು ತಿಂಗಳ ಮೊದಲ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರನ್ನ ನೇಮಕ ಮಾಡಬೇಕಾಗಿದ್ದು, ಇದಕ್ಕಾಗಿ ಈಗಾಗಲೇ ಮೀಸಲಾತಿಯನ್ನು ಮಾಡಲಾಗಿದ್ದು, ಆ ಪ್ರಕಾರ ನೇಮಕ ಮಾಡಿರುವ ಅಧಿಕಾರಿಗಳು, ಸದಸ್ಯರ ಸಭೆಯನ್ನ ಕರೆದು ಅಧ್ಯಕ್ಷ-ಉಪಾಧ್ಯಕ್ಷರನ್ನ ನೇಮಕ ಮಾಡುವಂತೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ನೀಡಿದ್ದಾರೆ.
ಧಾರವಾಡ ತಾಲೂಕಿನ 34 ಗ್ರಾಮ ಪಂಚಾಯತಿಗಳಿಗೆ ವಿವಿಧ ಇಲಾಖೆಗಳ ಅಧಿಕಾರಿಗಳನ್ನ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಆಯಾ ಗ್ರಾಮ ಪಂಚಾಯತಿಗಳ ಕಚೇರಿಯಲ್ಲಿ ಸರ್ವ ಸದಸ್ಯರ ಸಭೆಯನ್ನ ಕರೆದು ಅಧ್ಯಕ್ಷ ಉಪಾಧ್ಯಕ್ಷರನ್ನ ನೇಮಕ ಮಾಡುವಂತೆ ಆದೇಶ ಹೊರಡಿಸಿದ್ದಾರೆ.
ಶಿವಳ್ಳಿ ಗ್ರಾಮ ಪಂಚಾಯತಿಗೆ ಶಿಗ್ಗಾಂವ ಏತ ನೀರಾವರಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರವಿ ಅರಸಿಕೇರಿಯವರನ್ನ ನೇಮಕ ಮಾಡಲಾಗಿದೆ. ಹೆಬ್ಬಳ್ಳಿ ಪಂಚಾಯತಿಗೆ ಪಿಡಬ್ಲ್ಯೂಡಿ ಇಂಜಿನಿಯರ್ ವಿ.ಎನ್.ಪಾಟೀಲರನ್ನ, ನರೇಂದ್ರ ಗ್ರಾಮ ಪಂಚಾಯತಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ.ಖಾಜಿಯವರನ್ನ ನೇಮಕ ಮಾಡಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.