‘ಇಲ್ಲಿ’ ಎಕ್ಸಿಕ್ಯೂಟಿವ್ ಇಂಜಿನಿಯರ್ ‘ಅಲ್ಲಿ’ ಡಿಎಚ್ಓ ರೇಡ್..!
1 min readಕೋಲಾರ: ಅಕ್ರಮ ಆಸ್ತಿ ಸಂಪಾದನೆಯ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಕೋಲಾರ ಡಿಎಚ್ಓ ಮನೆ ಮೇಲೆ ಮೇಲೆ ದಾಳಿ ಮಾಡಿದ್ದು, ಹಲವು ಮಹತ್ವದ ದಾಖಲೆಗಳನ್ನ ವಶಕ್ಕೆ ಪಡೆಯುತ್ತಿದ್ದಾರೆ.
ಕೋಲಾರ ಡಿಹೆಚ್ಓ ಡಾ.ವಿಜಯ್ ಕುಮಾರ್ ಅವರ ಮನೆ, ಕೋಲಾರ ಕಚೇರಿ, ಮುಳಬಾಗಿಲು ಮನೆ, ಅವರ ಖಾಸಗಿ ಆಸ್ಪತ್ರೆ, ಚಿಂತಾಮಣಿ ಅವರ ಮನೆ, ಬೆಂಗಳೂರಿನ ಪ್ಲಾಟ್ ಸೇರಿ ಒಟ್ಟು ಆರು ಕಡೆ ಏಕಕಾಲದಲ್ಲಿ ದಾಳಿ ನಡೆದಿದೆ.
ಎಸಿಬಿ ಡಿವೈಎಸ್ಪಿ ಪುರುಷೋತ್ತಮ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಕೋಲಾರ ಜಿಲ್ಲೆಯ ಆರೋಗ್ಯ ಅಧಿಕಾರಿಯಿದ್ದರೂ ಖಾಸಗಿ ಆಸ್ಪತ್ರೆಯನ್ನೂ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.
ಏಕಕಾಲಕ್ಕೆ ಆರು ಕಡೆ ದಾಳಿ ನಡೆದಿದ್ದು, ಪರಿಶೀಲನೆಯಲ್ಲಿ 30ಕ್ಕೂ ಹೆಚ್ಚು ಅಧಿಕಾರಿಗಳು ಭಾಗವಹಿಸಿದ್ದಾರೆ. ಈಗಾಗಲೇ ಕೆಲವು ಮಹತ್ವದ ದಾಖಲೆಗಳು ಅಧಿಕಾರಿಗಳಿಗೆ ದೊರಕಿದ್ದು, ಇನ್ನಷ್ಟು ಮಾಹಿತಿಯನ್ನ ಕಲೆ ಹಾಕಲಾಗುತ್ತಿದೆ.