ದಿಂಗಾಲೇಶ್ವರ ಶ್ರೀಗಳ ಆಶೀರ್ವಾದವೂ ನನ್ನ ಗೆಲುವಿಗೆ ಕಾರಣ: ಪ್ರಲ್ಹಾದ ಜೋಶಿ

ಧಾರವಾಡ: ಶ್ರೀ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ದೊಡ್ಡ ಮಠದವರು. ಅವರ ಆಶೀರ್ವಾದ ಇದ್ದಿದ್ದರಿಂದಲೇ ನಾನು ಗೆಲುವು ಸಾಧಿಸಿದ್ದೇನೆ ಎಂದು ಧಾರವಾಡ ಲೋಕಸಭಾ ಕ್ಷೇತ್ರದಿಂದ ಐತಿಹಾಸಿಕ ಜಯ ಸಾಧಿಸಿದ ಪ್ರಲ್ಹಾದ ಜೋಶಿಯವರು ಹೇಳಿದರು.
ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಜೋಶಿಯವರು, ಮೊದಲಿಂದಲೂ ಶ್ರೀಗಳ ಆಶೀರ್ವಾದ ನನ್ನ ಮೇಲಿದೆ ಎಂದರು.
ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ಉತ್ತಮವಾಗಿ ಕೆಲಸ ಮಾಡಿದ್ದರಿಂದ ನನ್ನ ಗೆಲುವಾಗಿದೆ ಎಂದು ಜೋಶಿಯವರು ಹೇಳಿದರು.